ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಮೃತ್ಯು

ದ್ವಿಚಕ್ರ ವಾಹನಕ್ಕೆ ಢಿಕ್ಕಿ: ಮೃತ್ಯು

ಮಂಗಳೂರು: ರಾ.ಹೆ. 66ರ ನಂತೂರು-ಪಂಪ್‌ವೆಲ್ ಸರ್ವಿಸ್ ರಸ್ತೆಯಲ್ಲಿ ಟಿಪ್ಪರ್ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಮೃತ ಸವಾರನನ್ನು ಗೋಪಾಲ್ (29) ಎಂದು ಗುರುತಿಸಲಾಗಿದೆ. 

ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಗುರುಪುರದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಗೋಪಾಲ ಮುಳಿಹಿತ್ಲು ಬಳಿ ವಾಸವಾಗಿದ್ದರು ಎನ್ನಲಾಗಿದೆ. ಈ ಅಪಘಾತದಲ್ಲಿ ಮತ್ತೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದ್ದು, ಸವಾರನಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article