ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ
ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂದು ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಸ್ಪೀಕರ್ ಯು.ಟಿ. ಖಾದರ್ ಪತ್ರ ಬರೆದಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಮಂಗಳೂರು ವಕೀಲರ ಸಂಘ, ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಹೈಕೋರ್ಟ್‌ನ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸಿದರೆ ದ.ಕ., ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ. ಈ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಿದ್ದು, ವೈದ್ಯಕೀಯ, ಆರೋಗ್ಯ, ಶಿಕ್ಷಣ, ಬ್ಯಾಂಕಿಂಗ್, ಕೈಗಾರಿಕಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ.
ನಾನಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಹೈಕೋರ್ಟ್‌ಗೆ ಹೋಗಿ ಬರುತ್ತಿದ್ದಾರೆ. ಇದರಿಂದ ಆರ್ಥಿಕ ಹೊರೆ ಮಾತ್ರವಲ್ಲದೆ ಜನಸಾಮಾನ್ಯರಿಗೆ ಸಂಕಷ್ಟವೂ ಆಗುತ್ತಿದೆ. ಹಾಗಾಗಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಲು ಮುಂದಾಗಬೇಕು ಎಂದು ಸ್ಪೀಕರ್ ಖಾದರ್ ತನ್ನ ಪತ್ರದಲ್ಲಿ ತಿಳಿಸಿದ್ದಾರೆ.