ಪೊಳಲಿ ದೇವಸ್ಥಾನಕ್ಕೆ ಹೋದ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆ: ದೂರು ದಾಖಲು

ಪೊಳಲಿ ದೇವಸ್ಥಾನಕ್ಕೆ ಹೋದ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆ: ದೂರು ದಾಖಲು

ಮಂಗಳೂರು: ಉಳ್ಳಾಲ ತಾಲೂಕಿನ ಪಜೀರ್ ಅಡ್ಕ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರಿ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಜೀರ್ ಅಡ್ಕ ನಿವಾಸಿ ಗುಲಾಬಿ ಮತ್ತು ಜಗದೀಶ್ ಪೂಜಾರಿ ದಂಪತಿಯ ಪುತ್ರಿ, ಹರೇಕಳ ರಾಮಕೃಷ್ಣ ಹೈಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿನಿ ಚೈತನ್ಯ (16) ನಾಪತ್ತೆಯಾದವಳು. ಏಪ್ರಿಲ್ 12ರಂದು ಬೆಳಗ್ಗೆ 7.30ಕ್ಕೆ ಸ್ನೇಹಿತರ ಜೊತೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಈಕೆ, ರಾತ್ರಿಯಾದರೂ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಆತಂಕಗೊಂಡಿದ್ದಾರೆ. ಸಂಬಂಧಿಕರ ಹಾಗೂ ಸ್ನೇಹಿತರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಸುಳಿವು ಸಿಗದ ಕಾರಣ ಏಪ್ರಿಲ್ 15ರಂದು ಪೊಲೀಸರಿಗೆ ದೂರು ನೀಡಲಾಗಿದೆ.

ಕೊಣಾಜೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 137(2)ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕಾಣೆಯಾದ ಬಾಲಕಿಯು ಸುಮಾರು 5 ಅಡಿ ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾಳೆ. ನಾಪತ್ತೆಯಾದ ದಿನ ಈಕೆ ನೇರಳೆ ಬಣ್ಣದ ಗೌನ್ ಹಾಗೂ ಕಪ್ಪು ಬಣ್ಣದ ಕೋಟ್ ಧರಿಸಿದ್ದಳು.

ಈ ಬಾಲಕಿಯ ಬಗ್ಗೆ ಮಾಹಿತಿ ಇರುವವರು ಮಂಗಳೂರು ನಗರ ಪೊಲೀಸ್ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536/ 9480802350) ಸಂಪರ್ಕಿಸುವಂತೆ ಪೊಲೀಸರು ವಿನಂತಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article