ರಸ್ತೆ ಅಭಿವೃದ್ಧಿಗೆ ಶಾಸಕ ಕಾಮತ್ ನೇತೃತ್ವದಲ್ಲಿ ಭೂಮಿಪೂಜೆ

ರಸ್ತೆ ಅಭಿವೃದ್ಧಿಗೆ ಶಾಸಕ ಕಾಮತ್ ನೇತೃತ್ವದಲ್ಲಿ ಭೂಮಿಪೂಜೆ


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಸಂಜಯ ನಗರ ಪ್ರೀತಿ ಮುಗ್ರೋಡಿ ಇವರ ಮನೆಯ ಬಳಿ ರೂ. 50 ಲಕ್ಷ ವೆಚ್ಚದಲ್ಲಿ ರಸ್ತೆ ಹಾಗೂ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಭೂಮಿ ಪೂಜೆ ನಡೆಯಿತು.

ಬಳಿಕ ಅವರು ಮಾತನಾಡಿ, ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಇಲ್ಲಿನ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರುಗೊಳಿಸಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ಅನುದಾನಕ್ಕೆ ತಡೆ ನೀಡಿದ್ದ ಪರಿಣಾಮ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ರಸ್ತೆ ಮತ್ತು ತಡೆಗೋಡೆಗೆ ಚಾಲನೆ ದೊರೆತಿದ್ದು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು. 

ನಿಕಟಪೂರ್ವ ಪಾಲಿಕೆ ಸದಸ್ಯೆ ವನಿತಾ ಪ್ರಸಾದ್, ಪ್ರಸಾದ್ ಟಿ, ಬಾಬಣ್ಣ, ಯತೀಶ್, ಪ್ರೀತಿ ಪೂಜಾರಿ, ಮೋಹನ್, ಶ್ರೀಧರ್, ವಿನೋದ, ರವಿ ಶೆಟ್ಟಿ, ದಯಾನಂದ, ಜಯಂತಿ, ಗೋಪಾಲ, ನಿರ್ಮಲ, ಅಮ್ಮಿ ಸೇರಿದಂತೆ ವಾರ್ಡಿನ ಕಾರ್ಯಕರ್ತರು, ಹಾಗೂ ಪರಿಸರದ ನಾಗರಿಕರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article