ಸುಳ್ಯ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೋತ್ಸವ: ಮದ್ಯದಂಗಡಿ ಮುಚ್ಚಲು ಆದೇಶ

ಸುಳ್ಯ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೋತ್ಸವ: ಮದ್ಯದಂಗಡಿ ಮುಚ್ಚಲು ಆದೇಶ

ಮಂಗಳೂರು: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವವು ಎಪ್ರಿಲ್ 14 ರಿಂದ 20 ರವರೆಗೆ ನಡೆಯುತ್ತಿದ್ದು, ಜಾತ್ರೋತ್ಸವಕ್ಕೆ ಪ್ರತಿ ದಿನ ಸುಮಾರು 2,000 ಜನರು ಭಾಗವಹಿಸುವ ನಿರೀಕ್ಷೆಯಿದೆ. ಎಪ್ರಿಲ್ 19 ರಂದು ಕಟ್ಟೆ ಪೂಜೆ, ದೇವರ ಜಳಕ ಸ್ನಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಲಿದ್ದು, ಈ ಸಮಯ ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ತೊಡಿಕಾನ ಗ್ರಾಮದಲ್ಲಿರುವ ಸರಕಾರಿ ಸ್ವಾಮ್ಯದ ಎಂ.ಎಸ್.ಐ.ಎಲ್ ಮದ್ಯದಂಗಡಿಯನ್ನು ಎಪ್ರಿಲ್ 19 ರಂದು ಬೆಳಗ್ಗೆ 6 ಗಂಟೆಯಿಂದ ಎಪ್ರಿಲ್ 20 ರ ಬೆಳಗ್ಗೆ 6 ಗಂಟೆಯವರೆಗೆ ಮುಚ್ಚಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article