ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಉಪಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಯಾವುದೇ ಸಂಬಂಧ ಇಲ್ಲ. ಈ ವಿಚಾರಗಳ ಬಗ್ಗೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮುಂತಾದ ವಿಚಾರಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ನಾವು ಚರ್ಚೆ ಮಾಡುವ ಅಗತ್ಯ, ಅನಿವಾರ್ಯತೆ, ಅವಶ್ಯಕತೆ ಇಲ್ಲ. ಉಪ ಚುನಾವಣೆ ನಡೆದ ಎರಡು ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವಿನ ಬಲವಾದ ನಿರೀಕ್ಷೆಗಳು ಇದೆ. ಒಳ್ಳೆ ಫಲಿತಾಂಶ ಬರುವ ಬಗ್ಗೆ ನೂರಕ್ಕೆ ನೂರು ವಿಶ್ವಾಸವಿದೆ ಎಂದರು.

ನಾವು ಎಲ್ಲ ವರ್ಗ, ಧರ್ಮದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ. ನಮ್ಮಲ್ಲಿ ಯಾರನ್ನು ದೂರ ಮಾಡುವ ಪ್ರಶ್ನೆ ಬರುವುದಿಲ್ಲ. ಒಂದು ಕೋಮು ಇನ್ನೊಂದು ಕೋಮು ಎಂದು ಸೀಮಿತ ಅಲ್ಲ. ಚುನಾವಣೆ ಸಂದರ್ಭ ಟಿಕೆಟ್ ಸಿಕ್ಕಿಲ್ಲ ಎಂದು ಕೆಲವು ಆಕಾಂಕ್ಷಿಗಳಿಗೆ ನೋವು ಇರಬಹುದು. ಅದರಿಂದ ದೊಡ್ಡ ಸಮಸ್ಯೆ ಆಗುವುದಿಲ್ಲ. ನಮ್ಮವರೆಲ್ಲಾ ಚುನಾವಣಾ ಪ್ರಚಾರದಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ. ಬಿಜೆಪಿಯಲ್ಲಿ ಲಿಂಗಾಯತರಿಗೆ ಟಿಕೆಟ್ ಕೊಟ್ಟಿಲ್ಲ. ಹಾಗೆಂದು ಲಿಂಗಾಯತರು ಯಾರು ಓಟು ಹಾಕಿಲ್ಲ ಎಂದು ಹೇಳಲು ಆಗುತ್ತಾ? ದಾವಣಗೆರೆಯಲ್ಲಿ ಹೆಚ್ಚಿನ ಅಂತರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article