ಮಹಿಳಾ ಕಾಂಗ್ರೆಸ್ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾದಿಂದ ಜನಾಕ್ರೋಶ ಪ್ರತಿಭಟನಾ ಪಾದಯಾತ್ರೆ
ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಮಾತನಾಡಿ ದೇಶದ ರಾಷ್ಟ್ರಪತಿಯಂತಹ ಸ್ಥಾನದಲ್ಲಿ ಮಹಿಳೆಯರು ಇದ್ದಾರೆ. ಅವರು ದೇಶವನ್ನು ಮುನ್ನಡೆಸಲು ಸಮರ್ಥರು. ಹಾಗಿದ್ದೂ ಕಾಂಗ್ರೆಸ್ ಮಹಿಳೆಯರಿಗೆ ಅವಮಾನಿಸುವ ಕೆಲಸ ಮಾಡುತ್ತಿದೆ ಎಂದರು.
ದೇಶಕ್ಕೆ ಅಗತ್ಯವಿರುವ ಪ್ರತೀ ಸುಧಾರಣೆಗಳಿಗೂ ಅಡ್ಡಿಪಡಿಸುವುದೇ ಕಾಂಗ್ರೆಸ್ಸಿನ ಹುಟ್ಟುಗುಣ. ಡಿಜಿಟಲ್ ಪೇಮೆಂಟ್, ತ್ರಿವಳಿ ತಲಾಕ್ ನಿಷೇಧ, ಸಮಾನ ನಾಗರಿಕ ಸಂಹಿತೆ, ಅಕ್ರಮ ವಲಸಿಗರನ್ನು ಹೊರಹಾಕುವುದು, ಸೇರಿದಂತೆ ಈಗ ೩೩% ಮಹಿಳಾ ಮೀಸಲಾತಿಗೂ ಅಡ್ಡಗಾಲು ಹಾಕಿ ತಾವು ಎಂದಿಗೂ ಮಹಿಳಾ ವಿರೋಧಿಗಳು ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಮಂಡಲದ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂರ್ಣಿಮಾ ರಾವ್ ಹೇಳಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ, ಲಲೇಶ್ ಕುಮಾರ್, ಮಂಡಲದ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಕಮಲಾಕ್ಷಿ, ಶಬರಿ ಶೆಟ್ಟಿ, ಪ್ರಮುಖರಾದ ಸಂಧ್ಯಾ ವೆಂಕಟೇಶ್, ನಿಕಟಪೂರ್ವ ಮನಪಾ ಸದಸ್ಯರುಗಳು, ಸೇರಿದಂತೆ ಮಂಡಲದ ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

