ಪಿಲಿಕುಳ ಮೃಗಾಲಯ ದುರಸ್ತಿ: ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿಲ್ಲ
Saturday, April 4, 2026
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣಾ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ, ಎಪ್ರಿಲ್ 1 ರಿಂದ ಎಪ್ರಿಲ್ 8 ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.