ದೇಶ ಕಟ್ಟುಲು ಯುವ ಜನಾಂಗವನ್ನು ತಯಾರು ಮಾಡುವ ಜವಾಬ್ದಾರಿ ಶಿಕ್ಷಕರು ಮತ್ತು ಪೋಷಕರ ಮೇಲಿದೆ: ಡಾ. ಎನ್. ನರಸಿಂಹಯ್ಯ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ. ಎಸ್. ಅವರು, ಮೌಢ್ಯ ಹಾಗೂ ಅಸಮಾನತೆಯಿಂದ ಕೂಡಿದ್ದ ಭಾರತದ ಸಾಮಾಜಿಕ ವ್ಯವಸ್ಥೆಯಲ್ಲಿ ಮೌಲ್ಯ ಹಾಗೂ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ತಮ್ಮ ಪ್ರಯತ್ನಕ್ಕೆ ಅಡ್ಡಿಪಡಿಸಿದವರ ಧೋರಣೆಗೆ ಮೂಲ ಕಾರಣಗಳನ್ನು ಹುಡುಕಿ ಅಧ್ಯಯನ ಮಾಡಿ ಅದಕ್ಕೆ ಪರಿಹಾರವನ್ನು ಸಂವಿಧಾನದಲ್ಲಿ ರೂಪಿಸಿದ ಮಹಾನ್ ಚೇತನ ಡಾ. ಬಿ.ಆರ್. ಅಂಬೇಡ್ಕರ್ ಎಂದರು. ಪ್ರತೀಯೊಬ್ಬರು ಶಿಕ್ಷಣ ಪಡೆದು ತಮಗೆ ಉದ್ಯೋಗ ಲಭಿಸಿದ ನಂತರ ಸುಮ್ಮನಾಗದೆ ಮತ್ತೊಬ್ಬರ ಏಳಿಗೆಗೂ ಶ್ರಮಿಸುವ ಮೂಲಕ ಅಂಬೇಡ್ಕರ್ ಅವರ ಕನಸು ನನಸು ಮಾಡುವ ಜವಾಬ್ದಾರಿ ಪ್ರತೀಯೊಬ್ಬರ ಮೇಲಿದೆ ಎಂದರು.
ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ರಾಮಕೃಷ್ಣ ಬಿ.ಎಂ. ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು.
ವೇದಿಕೆಯಲ್ಲಿ ಎನ್.ಸಿ.ಸಿ. ಭೂದಳದ ಎಎನ್ಒ ಮೇಜರ್ ಡಾ. ಜಯರಾಜ್ ಎನ್, ಎನ್.ಸಿ.ಸಿ. ನೌಕಾದಳದ ಎಎನ್ಒ ಲೆಫ್ಟಿನೆಂಟ್ ಕಮಾಂಡರ್ ಡಾ. ಯತೀಶ್ ಕುಮಾರ್, ಎನ್ ಎಸ್ ಎಸ್ ಅಧಿಕಾರಿ ಡಾ. ಸುರೇಶ್, ಗ್ರಂಥಪಾಲಕಿ ಡಾ. ವನಜಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂಧಿ ಹಾಗೂ ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸಿದ್ದರು.

