ರೆಕ್ಟರ್ ಫಾ.ಮೆಲ್ವಿನ್ ಪಿಂಟೋ ಅವರ ನಿಧನಕ್ಕೆ ರೈ ಸಂತಾಪ
Friday, April 10, 2026
ಮಂಗಳೂರು: ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ರೆಕ್ಟರ್ ಫಾ. ಮೆಲ್ವಿನ್ ಪಿಂಟೋ ಅವರ ನಿಧನದ ಸುದ್ದಿ ತುಂಬಾ ದುಃಖಕರ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಸೇವೆ ಅಮೂಲ್ಯವಾಗಿದೆ. ಅವರ ಅಗಲಿಕೆ ದೊಡ್ಡ ನಷ್ಟ. ಅವರ ಆತ್ಮೀಯತೆ, ಸರಳತೆ ಮತ್ತು ವಿದ್ಯಾರ್ಥಿಗಳ ಮೇಲಿನ ಅಪಾರ ಪ್ರೀತಿ ಎಂದಿಗೂ ಮರೆಯಲಾಗದು. ಅನೇಕ ವಿದ್ಯಾರ್ಥಿಗಳ ಜೀವನಕ್ಕೆ ಅವರು ದಾರಿ ತೋರಿದ ಮಾರ್ಗದರ್ಶಕರಾಗಿದ್ದರು. ಅವರ ಸೇವೆ ಮತ್ತು ಸಾಧನೆಗಳು ಸದಾ ಜೀವಂತವಾಗಿರುತ್ತವೆ.
ಭಗವಂತರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರು, ಅನುಯಾಯಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವ ಬಿ. ರಾಮನಾಥ ರೈ ಸಂತಾಪ ಸೂಚಿಸಿದ್ದಾರೆ.