ತಿಮರೋಡಿ ವಿರುದ್ಧ ಮತ್ತೆರಡು ಪ್ರಕರಣ ದಾಖಲು

ತಿಮರೋಡಿ ವಿರುದ್ಧ ಮತ್ತೆರಡು ಪ್ರಕರಣ ದಾಖಲು

ಮಂಗಳೂರು: ಯಕ್ಷಗಾನ ಕಲಾವಿದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಲ್ಲಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ಸಂಬಂಧ ಯಕ್ಷಗಾನ ಕಲಾವಿದರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬೆದರಿಕೆ ಹಾಕಿರುವ ಆರೋಪ ತಿಮರೋಡಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಮಹಿಳಾ ಠಾಣೆ ಮತ್ತು ಗ್ರಾಮಾಂತ್ರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಧರ್ಮಸ್ಥಳ ಪ್ರಕರಣವನ್ನೇ ಹೋಲುವು ಕಥೆ ಹೊಂದಿರುವ ‘ಬುರುಡೆ ಗ್ಯಾಂಗ್’ ಹೆಸರಿನ ಯಕ್ಷಗಾನ ಪ್ರಸಂಗ ನಿರ್ಮಾಣ ಮಾಡಲಾಗಿತ್ತು. ಇದರಿಂದ ಆಕ್ರೋಶಿತರಾದ ಮಹೇಶ್ ಶೆಟ್ಟಿ ತಿಮರೋಡಿ ಏ.11ರಂದು ಯಕ್ಷಗಾನ ಹಾಸ್ಯ ಕಲಾವಿಧ ಪ್ರಜ್ವಲ್ ಗುರುನಾಯನಕೆರೆಗೆ ಕರೆ ಮಾಡಿದ್ದರು. 

ಈ ವೇಳೆ ಕಲಾವಿದ ದಿನೇಶ್ ಶೆಟ್ಟಿಗಾರ್ ಮತ್ತು ಚಿತ್ರನಟ ಮಂದಾರ ಸುಂದರ ರೈ ಅವರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಲ್ಲದೆ, ಅವರ ತಾಯಂದಿರ ಚಾರಿತ್ರ್ಯದ ಬಗ್ಗೆಯೂ ತೀರಾ ಕೆಟ್ಟದಾಗಿ ಮಾತನಾಡಿದ್ದರು. ಆ ಆಡಿಯೋವನ್ನು ದಿನೇಶ್ ಶೆಟ್ಟಿ ಮತ್ತು ಸುಂದರ ರೈಗೆ ಪ್ರಜ್ವಲ್ ಕಳುಹಿಸಿದ್ದು, ಅದನ್ನು ಕೇಳಿ ಕಲಾವಿದರು ತೀವ್ರ ನೊಂದಿದ್ದಾರೆ. 

ಈ ಹಿನ್ನೆಲೆ ಸುಂದರ ರೈ ನೀಡಿದ ದೂರಿನಡಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ತಿಮರೋಡಿ ವಿರುದ್ಧ ಈIಖ ದಾಖಲಾಗಿದ್ದರೆ, ದಿನೇಶ್ ಶೆಟ್ಟಿಗಾರ್ ತಾಯಿ ಲೀಲಾವತಿ ಶೆಟ್ಟಿಗಾರ್ ದೂರಿನಡಿ ಮಹಿಳಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article