ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Monday, April 27, 2026
ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬೆಂಗಳೂರಿನ ಬನಶಂಕರಿ ನಿವಾಸಿ ಮಣಿ ಯಾನೆ ಮಣಿಕಂಠ (32) ಎಂದು ಗುರುತಿಸಲಾಗಿದೆ.
ಬೆಳ್ತಂಗಡಿಯ ಠಾಣಾ ಸಿಬ್ಬಂದಿಗಳಾದ ವ್ರಷಭ, ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿ ಏ.27 ರಂದು ಬೆಳ್ತಂಗಡಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿ, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತಾರೆ.