ನಿಷೇಧಾಜ್ಞೆ
Monday, April 6, 2026
ಮಂಗಳೂರು: ಏ.7 ರಿಂದ ನಡೆಯಲಿರುವ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಕಾರ್ಯವನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಮತ್ತು ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 7 ಮೌಲ್ಯಮಾಪನಾ ಕೇಂದ್ರಗಳ 500 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೆಧಿತ ಪ್ರದೇಶವೆಂದು ಘೋಷಿಸಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್ ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿದ್ದಾರೆ.