ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
Tuesday, April 21, 2026
ಮಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರೆಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಎ.24 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.