ಏ.11 ರಂದು ಮೂಡುಬಿದಿರೆಯಲ್ಲಿ  ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್

ಏ.11 ರಂದು ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್


ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-2026 ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ  ಏ.11 ಶನಿವಾರದಂದು ನಡೆಯಲಿದೆ ಎಂದು ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ. ಎಸ್ ಸತೀಶ್ ಕುಮಾರ್ ತಿಳಿಸಿದರು.

ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅಪರಾಹ್ನ 3:30ಕ್ಕೆ ಮಹಿಳೆಯರ ವಿಭಾಗದ ಪಂದ್ಯಾಟವನ್ನು ವಕೀಲರಾದ ಶ್ವೇತಾ ಜೈನ್ ಉದ್ಘಾಟಿಸಲಿದ್ದಾರೆ. ಮೂಡುಬಿದಿರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್ ಅಂಕಣದ ಉದ್ಘಾಟನೆ ಮಾಡಲಿದ್ದು ನೀಡಲಿದ್ದು,  ಮುಖ್ಯ ಅತಿಥಿಗಳಾಗಿ ಸಚ್ಚೇರಿಪೇಟೆಯ ಸಂದೀಪ್ ಶೆಟ್ಟಿ ಹಾಗೂ ಮಾಡರ್ನ್ ಡೆವೆಲಪರ್ಸ್‌ನ ಇಂಜಿನಿಯರ್ ಜಾವೆದ್ ಶೇಕ್ ಭಾಗವಹಿಸಲಿದ್ದಾರೆ.

ಸಂಜೆ 7:30ಕ್ಕೆ ಪುರುಷರ ವಿಭಾಗದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ, ತಾಲೂಕು ವಾಲಿಬಾಲ್ ಅಸೋಸಿಯೇಷನ್ ಗೌರವಾಧ್ಯಕ್ಷ ಉಮಾನಾಥ ಎ. ಕೋಟ್ಯಾನ್ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಂಕಣವನ್ನು ಉದ್ಘಾಟಿಸಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಧ್ಯಕ್ಷತೆ ವಹಿಸಲಿದ್ದಾರೆ.

ಗೌರವ ಉಪಸ್ಥಿತಿಯಲ್ಲಿ ಬಿ. ಎಸ್ ಸತೀಶ್ ಕುಮಾರ್, ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ದಕ್ಷಿಣ ಕನ್ನಡ ಹಾಲು ಒಕ್ಕೂಟದ ನಿರ್ದೇಶಕ ಕೆ. ಪಿ. ಸುಚರಿತ ಶೆಟ್ಟಿ, ಗೌರವ ಸಲಹೆಗಾರ ಜಯಪ್ರಕಾಶ್ ರೈ, ಹೋಟೆಲ್ ರಂಗೋಲಿಯ ಮಾಲಕ ಚಂದ್ರಹಾಸ ಶೆಟ್ಟಿ ಹಾಗೂ ಮಾಜಿ ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಸುನೀಲ್ ಬಾಳಿಗ ಉಪಸ್ಥಿತರಿರುವರು.

ಸಮಾರೋಪ ಸಮಾರಂಭದಲ್ಲಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಡಾ. ವಿನಯ ಆಳ್ವ ಅಧ್ಯಕ್ಷತೆ ವಹಿಸಲಿದ್ದು, ಬಿ. ಎಸ್ ಸತೀಶ್ ಕುಮಾರ್ ಬಹುಮಾನ ವಿತರಿಸುವರು. ಜಿಲ್ಲಾ ಕಾರ್ಯದರ್ಶಿ ಶಂಕರ್ ಶೆಟ್ಟಿ ಉಪಸ್ಥಿತರಿರುವರು. 

ಕಾರ್ಯಕ್ರಮಕ್ಕೆ ಜಿಲ್ಲಾ ಗೌರವಾಧ್ಯಕ್ಷ ಎ. ಸುರೇಶ್ ಬಾಬು, ಜಿಲ್ಲಾ ಕಾರ್ಯದರ್ಶಿ ಶಂಕರ ಶೆಟ್ಟಿ ಪರಾರಿಗುತ್ತು, ಕೋಶಾಧಿಕಾರಿ ಇಬ್ರಾಹಿಂ ಗೂನಡ್ಕ, ಉಪಾಧ್ಯಕ್ಷ ಸಂಶುದ್ದೀನ್ ಸುಳ್ಯ, ಲಿಲ್ಲಿ ಪಾಯ್ಸ್, ಸಂಘಟನಾ ಕಾರ್ಯದರ್ಶಿ ಅಹಮ್ಮದ್ ಮುಸ್ತಾಫ, ಸಹ ಕಾರ್ಯದರ್ಶಿ ಹೈದರ್ ಕೈರಂಗಳ, ತಾಲೂಕು ಅಧ್ಯಕ್ಷ ಡಾ. ವಿನಯ ಆಳ್ವ, ಕಾರ್ಯದರ್ಶಿ ಎಸ್. ನಾಗೇಶ ಹಾಗೂ ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಸೇರಿದಂತೆ ಉಭಯ ಸಂಘಟನೆಗಳ ಸದಸ್ಯರು ಆಗಮಿಸುವರು ಎಂದು ಸತೀಶ್ ಕುಮಾರ್ ಮಾಹಿತಿ ನೀಡಿದರು.

ಅಸೋಸಿಯೇಷನ್ ತಾಲೂಕು ಕಾರ್ಯದರ್ಶಿ ಎಸ್.ನಾಗೇಶ್, ಸದಸ್ಯರಾದ ಸತೀಶ್, ವಿಶ್ವನಾಥ್ ಶೆಟ್ಟಿ, ಸತೀಶ್ ಭಂಡಾರಿ ಸುದ್ದಿಗೋಷ್ಠಿಯಲ್ಲಿದರು.

ಮೂಡುಬಿದಿರೆಯಲ್ಲಿ ಇಂಡೋರ್ ಸ್ಟೇಡಿಯಂಗೆ ಆಗ್ರಹ:

ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕೆ ಮೂಡುಬಿದಿರೆಯಲ್ಲಿ ಇಂಡೋರ್ ಸ್ಟೇಡಿಯಂ ನಿರ್ಮಾಣದ ಅಗತ್ಯವಿದೆ ಎಂದು ತಿಳಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article