ಎ.19 ರಂದು ಆತ್ಮಶಕ್ತಿ ಸಹಕಾರಿ ಸಂಘದ ಮೂಡುಬಿದಿರೆ ಶಾಖೆ ಉದ್ಘಾಟನೆ
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಸ್ಥೆ ಬೆಳೆದು ಬಂದ ಹಾದಿ, ಕೈಗೊಂಡ ಸಮಾಜಮುಖಿ ಕಾರ್ಯಗಳು, ಅಶಕ್ತರಿಗೆ,ಬಡ ವಿದ್ಯಾರ್ಥಿಗಳಿಗೆ ನೀಡಿದ ನೆರವು,ಆರೋಗ್ಯ ಶಿಬಿರಗಳ ಸಹಿತ ಆಯೋಜಿಸಿರುವ ಸಮಾಜಸೇವಾ ಕೆಲಸಗಳ ಕುರಿತು ಹಾಗೂ ಶಾಖೆಗಳು, ಸಿಬ್ಬಂದಿಗಳ ಕುರಿತು ಮಾಹಿತಿ ನೀಡಿದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ.
ಸಂಘದ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ.
ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿರುವ ಐ.ತಾರನಾಥ ಪೂಜಾರಿ ಅವರು ಭದ್ರತಾಕೋಶವನ್ನು ಉದ್ಘಾಟಿಸಲಿದ್ದು ಆಳ್ವಾಸ್ ಮುಖ್ಯಸ್ಥ ಡಾ.ಎಂ.ಮೋಹನ ಆಳ್ವ ಅವರು ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ.ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಭಾಸ್ಕರ ಎಸ್.ಕೋಟ್ಯಾನ್ ಅವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೂಡುಬಿದಿರೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಶ್ ಕೆ.ಪೂಜಾರಿ ಅವರು ಇ- ಮುದ್ರಾಂಶ ಸೇವೆಗೆ, ವಕೀಲರ ಸಂಘದ ಅಧ್ಯಕ್ಷ ಹರೀಶ್ ಪಿ.ಅವರು ಉಳಿತಾಯ ಖಾತೆಗೆ,ಪುರಸಭಾ ನಿಕಟಪೂರ್ವ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಆವರ್ತನ ಖಾತೆಗೆ,ದೇವಾಡಿಗ ಸುಧಾರಕ ಸಂಘದ ಅಧ್ಯಕ್ಷ ಪುರಂದರ ದೇವಾಡಿಗ ಅವರು ಪಿಗ್ಮಿ ಖಾತೆಗೆ ಚಾಲನೆ ನೀಡಲಿದ್ದಾರೆ.
ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್, ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.ಕೆ, ಪ್ರೆಸ್ ಕ್ಲಬ್ ಅಧ್ಯಕ್ಷ ಬಿ.ಸೀತಾರಾಮ ಆಚಾರ್ಯ, ಉದ್ಯಮಿ ಕೆ.ಶ್ರೀಪತಿ ಭಟ್ ಹಾಗೂ ಕಡ್ಟಡ ಮಾಲಕರಾದ ಸುರೇಶ್ ಆಚಾರ್ಯ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದವರು ಮಾಹಿತಿ ನೀಡಿದರು.
ಸಂಘದ ಉಪಾಧ್ಯಕ್ಷ ನೇಮಿರಾಜ್ ಪೂಜಾರಿ, ನಿರ್ದೇಶಕರಾದ ಪರಮೇಶ್ವರ ಪೂಜಾರಿ, ಗೋಪಾಲ ಎನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಂದೀಪ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.