ಮೂಡುಬಿದಿರೆ ಶ್ರೀ ಧವಲಾ ಕಾಲೇಜಿನಲ್ಲಿ  ಏಪ್ರಿಲ್ 9 ರಂದು 'ಧವಲಾ ಸಿರಿ-2026' ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

ಮೂಡುಬಿದಿರೆ ಶ್ರೀ ಧವಲಾ ಕಾಲೇಜಿನಲ್ಲಿ ಏಪ್ರಿಲ್ 9 ರಂದು 'ಧವಲಾ ಸಿರಿ-2026' ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ ಲಲಿತಕಲಾ ಸಂಘದ ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ 'ಧವಲಾ ಸಿರಿ - 2026' ಅನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಾನ್ವೇಷಣಾ ಕಾರ್ಯಕ್ರಮ ಏಪ್ರಿಲ್ 9ರಂದು ಬೆಳಿಗ್ಗೆ 9:00 ಗಂಟೆಯಿಂದ ಕಾಲೇಜಿನ ಆವರಣದಲ್ಲಿ ಜರುಗಲಿದೆ.

ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸಾಂಸ್ಕೃತಿಕ ಹಬ್ಬವನ್ನು ಆಯೋಜಿಸಲಾಗಿದ್ದು, ಇದರಲ್ಲಿ ರಂಗೋಲಿ, ರಸಪ್ರಶ್ನೆ ಹಾಗೂ ರೀಲ್ಸ್ ಮೇಕಿಂಗ್ ಸೇರಿದಂತೆ ವಿವಿಧ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಈ ಸ್ಪರ್ಧೆಗಳಲ್ಲಿ ವಿಜೇತರಾಗುವ ತಂಡಗಳಿಗೆ ಆಕರ್ಷಕ ನಗದು ಬಹುಮಾನಗಳನ್ನು ನೀಡಲಾಗುತ್ತಿದ್ದು, ಪ್ರಥಮ ಬಹುಮಾನವಾಗಿ 12,000 ರೂ., ದ್ವಿತೀಯ ಬಹುಮಾನವಾಗಿ 8,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ.ಗಳೊಂದಿಗೆ ಪ್ರಶಸ್ತಿ ಫಲಕಗಳನ್ನು ವಿತರಿಸಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲಿ 'ಅತ್ಯುತ್ತಮ ನಟನೆ' ಮತ್ತು 'ಉತ್ತಮ ಕಾರ್ಯಕ್ರಮ ನಿರೂಪಣೆ'ಗೆ ವಿಶೇಷ ಗೌರವ ಸಲ್ಲಿಸಿ ಪುರಸ್ಕರಿಸಲಾಗುವುದು.

ಈ ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮತ್ತು ಸ್ಪರ್ಧೆಯ ನಿಯಮಾವಳಿಗಳಿಗಾಗಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಪಾರ್ಶ್ವನಾಥ ಅಜ್ರಿ ಅಥವಾ ಸಂಯೋಜಕರಾದ ಶ್ರೀಮತಿ ಮಲ್ಲಿಕಾ ರಾವ್ (9945249401) ಅವರನ್ನು ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article