ಮೂಡುಬಿದಿರೆಯಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್ ಗೆ ಚಾಲನೆ
Saturday, April 11, 2026
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಹಾಗೂ ಮೂಡುಬಿದಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಪುರುಷರ ಮತ್ತು ಮಹಿಳೆಯರ ವಿಭಾಗದ ವಾಲಿಬಾಲ್ ಚಾಂಪಿಯನ್‌ಶಿಪ್-2026ಕ್ಕೆ ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಶನಿವಾರ ಸಂಜೆ ಆರಂಭಗೊಂಡಿತು.
ಮಹಿಳೆಯರ ವಿಭಾಗದ ಚಾಂಪಿಯನ್ ಶಿಫ್ ನ್ನು ಮಹಿಳೆಯರ ವಿಭಾಗದ ಪಂದ್ಯಾಟವನ್ನು ವಕೀಲರಾದ ಶ್ವೇತಾ ಜೈನ್ ಉದ್ಘಾಟಿಸಿ ಮಾತನಾಡಿ ಮಹಿಳೆಯರು ಪುರುಷರಿಗೆ ಸಮಾನವಾಗಿ ಎಲ್ಲಾ ಕಡೆಗಳಲ್ಲೂ ಇದ್ದಾರೆ. ಭಾರತದ ವಾಲಿಬಾಲ್ ತಂಡವು ದಕ್ಷಿಣ ಭಾರತಕ್ಕೆ ಹೋಲಿಸಿದರೆ ಬಲಿಷ್ಠವಾದ ತಂಡವಾಗಿದೆ ಆದರೆ ಜಪಾನ್, ಚೀನಾ ಮತ್ತು ಕೊರಿಯಾ ತಂಡಗಳಿಗೆ ಹೋಲಿಸಿದರೆ ನಮ್ಮ ದೇಶದ ಮಹಿಳಾ ತಂಡಗಳಿಗೆ ಹೆಚ್ಚಿನ ತರಬೇತಿಯ ಅವಶ್ಯಕತೆಯಿದೆ ಎಂದೆನಿಸುತ್ತದೆ ಎಂದರು.
ಜಿಲ್ಲಾ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಬಿ. ಎಸ್ ಸತೀಶ್ ಕುಮಾರ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಕ್ರಿಕೆಟ್ ಮತ್ತು ವಾಲಿಬಾಲ್ ಕ್ರೀಡೆಗಳು ಜೀವನದ ಒಂದು ಭಾಗವಾಗಿದೆ. ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಸಾಮಥ್ಯ೯ವನ್ನು ಹೊಂದಿದ್ದಾರೆ ಆದರೆ ಸಮಾಜ ಆಕೆಯ ಮಾನಸಿಕವಾಗಿ ಕುಗ್ಗಿಸುತ್ತಿದೆ.ಮಹಿಳೆ ಸವಾಲುಗಳನ್ನು ಎದುರಿಸಿ ಮಂದೆ ಬಂದಾಗ ಯಶಸ್ಸು ಸಾಧ್ಯ ಎಂದ ಅವರು ಅಸೋಸಿಯೇಷನ್ ಪಂದ್ಯಾಟಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳ ಹುಡುಕಾಟದಲ್ಲಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.
ಮೂಡುಬಿದಿರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹರ್ಷವರ್ಧನ್ ಪಡಿವಾಳ್ ಅಂಕಣವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಉಜಿರೆ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷ ಡಾ. ವಿನಯ್ ಆಳ್ವ, ಎಸ್. ಡಿ. ಎಂ ಕಾಲೇಜಿನ ದೈಹಿಕ ಶಿಕ್ಷಣ ನಿದೇ೯ಶಕ ರಮೇಶ್ ಶೆಟ್ಪಿ ಹಾಗೂ ಮಾಡರ್ನ್ ಡೆವೆಲಪರ್ಸ್‌ನ ಇಂಜಿನಿಯರ್ ಜಾವೆದ್ ಶೇಕ್ ಭಾಗವಹಿಸಲಿದ್ದಾರೆ.
ನಾಗೇಶ್ ಎಸ್ ಸ್ವಾಗತಿಸಿದರು. ಜಿಲ್ಲಾ ಅಸೋಸಿಯೇಷನ್ ಕಾಯ೯ದಶಿ೯ ಶಂಕರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮೋದ್ ಕಾಯ೯ಕ್ರಮ ನಿರೂಪಿಸಿ ವಂದಿಸಿದರು.


