ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿಗೆ ಅವಳಿ ಪ್ರಶಸ್ತಿ

ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿಗೆ ಅವಳಿ ಪ್ರಶಸ್ತಿ


ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ಮತ್ತು ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಸತತ 22ನೇ ಬಾರಿ ಅವಳಿ ಪ್ರಶಸ್ತಿ ಪಡೆದುಕೊಂಡಿದೆ. 

ಫೈನಲ್ ಪಂದ್ಯಾಟದಲ್ಲಿ ಪುರುಷರ ತಂಡವು ಭುವನೇಂದ್ರ ಕಾಲೇಜು ತಂಡವನ್ನು ಸೋಲಿಸಿ ಶ್ರೀ ಎಂ.ಕೆ ಅನಂತರಾಜ್ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿತು. ಮಹಿಳೆಯರ ತಂಡವು ಎಸ್.ವಿ.ಟಿ ಕಾಲೇಜು ಕಟೀಲು ತಂಡವನ್ನು ಸೋಲಿಸಿ ಫೇಬಿಯನ್ ಬಿ ಎನ್ ಕುಲೊಸೊ ಮೆಮೋರಿಯಲ್ ರೋಲಿಂಗ್ ಟ್ರೋಫಿಯನ್ನು ಪಡೆದುಕೊಂಡಿದೆ. 

ಪುರುಷರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ನಂದ ಕುಮಾರ್ ಪಡೆದುಕೊಂಡರೆ, ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಆಕಾಶ್ ಪಡೆದುಕೊಂಡರು. 

ಮಹಿಳೆಯರ ವಿಭಾಗದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಆಳ್ವಾಸ್‌ನ ತನುಶ್ರೀ ಪಡೆದುಕೊಂಡರೆ ಬೆಸ್ಟ್ ರಿಸಿವರ್ ಪ್ರಶಸ್ತಿಯನ್ನು ಗೀತಾ ಪಡೆದುಕೊಂಡರು. 

ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article