ಬೆದ್ರ ಉತ್ಸವ: ಡಾ.ಎಂ ಮೋಹನ ಆಳ್ವರಿಗೆ ಬೆದ್ರ ಮಾಣಿಕ್ಯ ಪ್ರಶಸ್ತಿ ಪ್ರದಾನ
Sunday, April 12, 2026
ಮೂಡುಬಿದಿರೆ: ಬೆದ್ರ ಉತ್ಸವ ಸಮಿತಿ ಆಶ್ರಯದಲ್ಲಿ ನಡೆದ ಬೆದ್ರ ಉತ್ಸವ 2026 ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವರಿಗೆ ಬೆದ್ರ ಮಾಣಿಕ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಮೋಹನ ಆಳ್ವ, ನನ್ನ ತಂದೆ ಮಿಜಾರು ಆನಂದ ಆಳ್ವ ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ ನೀಡಿದೆ.ಬೆದ್ರ ಉತ್ಸವ ಪ್ರಥಮ ಬಾರಿ ನಡೆಯುತ್ತಿದ್ದು, ಪ್ರತಿ ವರ್ಷ ನಡೆಯುವಂತಾಗಬೇಕು ಎಂದರು.
ಹಿರಿಯ ವಕೀಲ ಬಾಹುಬಲಿ ಪ್ರಸಾದ್,ಮುಖಂಡ ಕೆ.ಪಿ ಜಗದೀಶ್ ಅಧಿಕಾರಿ, ಪುರಸಭೆ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಬೆದ್ರ ಉತ್ಸವ ಸಮಿತಿಯ ಉಪಾಧ್ಯಕ್ಷ ಸುದರ್ಶನ ಎಂ., ಸಂಚಾಲಕ ಹರೀಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಗೋಪಾಲ ಶೆಟ್ಟಿಗಾರ್, ಕೋಶಾಧಿಕಾರಿ ನಾಗೇಶ್ ಬಂಗೇರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
