ಧಮ೯ದೈವದ ಭಂಡಾರ ತರುತ್ತಿದ್ದಾಗ ಕಾಲು ಸಂಕ ಕುಸಿತ: ಎಂಟು ಮಂದಿಗೆ ಗಾಯ
Wednesday, April 22, 2026
ಮೂಡುಬಿದಿರೆ: ತಾಕೊಡೆ ಬರ್ಕೆ ಧರ್ಮನೇಮಕ್ಕೆ ಬಾವದಗುತ್ತುವಿನಿಂದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಮೆರವಣಿಗೆ ಸಾಗಿಸುತ್ತಿದ್ದ ವೇಳೆ ಕಾಲು ಸಂಕ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ಬುಧವಾರ ನಡೆದಿದೆ.
ಅವಘಡದಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ, ಮಾರೂರು, ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರು ಗಾಯಗೊಂಡವರು.
ಕಲ್ಲಿನ ಕಾಲು ಸಂಕ (ಬೀಮ್) ಪಲ್ಲಕ್ಕಿ ಹೊತ್ತವರ ಮೇಲೆ ಬಿದ್ದ ಪರಿಣಾಮ, ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳು ಕೆಳಕ್ಕೆ ಬಿದ್ದಿವೆ.
ಈ ವೇಳೆ ಕೊಂಬು ಮತ್ತು ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ನಡೆಯುತ್ತಿತ್ತು.
ಘಟನೆ ತಿಳಿದ ಕೂಡಲೇ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.