ರಸ್ತೆ ದಾಟುತ್ತಿದ್ದ ಮಹಿಳೆಗೆ ಬೈಕ್ ಢಿಕ್ಕಿ: ಸಾವು
Friday, April 17, 2026
ಮೂಡುಬಿದಿರೆ: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಮಹಿಳೆ ಮೃತಪಟ್ಟ ಘಟನೆ ಶುಕ್ರವಾರ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನ ಮಾಗಂದಡಿಯಲ್ಲಿ ನಡೆದಿದೆ.
ಪಾಲಡ್ಕ ಗ್ರಾಮದ ತಾಳಿದಡಿ ನಿವಾಸಿ ಸುಮಿತ್ರಾ ಮೃತಪಟ್ಟವರು. ಕೇಪ್ಲಾಜೆಯ ಸುಪ್ರೇಶ್ ಎಂಬವರು ತಮ್ಮ ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಮಾಗಂದಡಿ ಎಂಬಲ್ಲಿ ರಸ್ತೆ ದಾಟುತ್ತಿದ್ದ ಸುಮಿತ್ರಾ ಅವರಿಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಸುಮಿತ್ರಾ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸುಮಿತ್ರಾ ಮೃತಪಟ್ಟಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.