ಪಾಲಡ್ಕದಲ್ಲಿ ವಿದ್ಯುತ್ ತಂತಿ ತುಂಡಾಗಿ ಬೆಂಕಿ ಅವಘಡ
Saturday, April 25, 2026
ಮೂಡುಬಿದಿರೆ: ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ವಿದ್ಯುತ್ ತಂತಿ ತುಂಡಾಗಿ ಬೆಂಕಿ ಅವಘಡ ಸಂಭವಿಸಿದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಬಿ.ಟಿ. ರೋಡ್ ಪ್ರದೇಶದಲ್ಲಿ ಶನಿವಾರ ನಡೆದಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಅವಘಡದಿಂದ ಅರಣ್ಯ ಪ್ರದೇಶದ ಕೆಲವು ಭಾಗಕ್ಕೆ ಹಾನಿಯಾಗಿರುವ ಸಾಧ್ಯತೆ ಇದ್ದು, ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಸ್ಥಳೀಯರು, ಅಗ್ನಿಶಾಮಕದಳ ಸಿಬ್ಬಂದಿ, ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಸಹಕರಿಸಿದ್ದಾರೆ.

