ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಜಿಯೋಜೆಬ್ರಾ’ ಕಾರ್ಯಾಗಾರ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಮಾತನಾಡಿ, ತಮ್ಮ ಪಿಎಚ್.ಡಿ ಸಂಶೋಧನೆಯ ಅನುಭವಗಳನ್ನು ಹಂಚಿಕೊಂಡು, ತಮ್ಮ ಸಂಶೋಧನೆ ಭೌತಶಾಸ್ತ್ರ ಕ್ಷೇತ್ರಕ್ಕೆ ಸೇರಿದದ್ದಾಗಿದ್ದರೂ ಅದರಲ್ಲಿ ಗಣಿತದ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು ಎಂದು ಹೇಳಿ, ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಮತ್ತು ಸಂಶೋಧನೆಗೆ ಅಗತ್ಯವಾದ ಮೂಲಭೂತ ಗಣಿತ ಜ್ಞಾನವನ್ನು ಹೊಂದಿರಬೇಕು ಎಂದು ಸಲಹೆ ನೀಡಿದರು.
ಇನ್ನೋರ್ವ ಸಂಪನ್ಮೂಲ ವ್ಯಕ್ತಿ ವಾಮಂಜೂರಿನ ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶಿವಾನಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಕ್ಷಿತಾ ಕೆ. ಶೆಟ್ಟಿ, ಸ್ನಾತಕೋತ್ತರ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರತೀಕ್ಷಾ, ದೀಪಿಕಾ ಅಂಜು ಜೇಮ್ಸ್ ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿಯರಾದ ಮಾನಸಾ ಮತ್ತು ಅಶ್ವಿನಿ ಪ್ರಾರ್ಥನೆ ನೆರವೇರಿಸಿದರು.ಗಣಿತ ವಿಭಾಗದ ಮುಖ್ಯಸ್ಥೆ ತನುಜಾ ಎನ್.ಪಿ. ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ರಕ್ಷಿತಾ ಕೆ. ಶೆಟ್ಟಿ ವಂದಿಸಿದರು. ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಪ್ರೀಮಲ್ ಜೆಸ್ವಿಟಾ ಬ್ರಾಗ್ಸ್ ಕಾರ್ಯಕ್ರಮ ನಿರೂಪಣೆ ಮಾಡಿದರು.
