ಬೈಕ್ ಅಪಘಾತ: ಸವಾರ ಸ್ಥಳದಲ್ಲಿಯೇ ಮೃತ್ಯು

ಬೈಕ್ ಅಪಘಾತ: ಸವಾರ ಸ್ಥಳದಲ್ಲಿಯೇ ಮೃತ್ಯು


ಪುತ್ತೂರು: ಬೆಂಗಳೂರಿನಲ್ಲಿ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವಕನೋರ್ವ ಪುತ್ತೂರು ಜಾತ್ರೋತ್ಸವದಲ್ಲಿ ಸ್ನೇಹಿತರು ಹಾಕಿದ್ದ ಸ್ಟಾಲ್ ಗೆ ಬಂದಿದ್ದು, ಅಲ್ಲಿಂದ ತನ್ನ ಮನೆಗೆ ಹೋಗುತ್ತಿರುವ ಸಂದರ್ಭ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಪುತ್ತೂರಿನ ಪಡೀಲ್ ಎಂಬಲ್ಲಿ ಈ ಘಟನೆ ನಡೆದಿದ್ದು, ಬೆಳ್ಳಿಪ್ಪಾಡಿ ಕೊಡಿಮರದ ವಿಶ್ವನಾಥ ಪೂಜಾರಿ ಅವರು ಪುತ್ರ ಧನರಾಜ್ (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಪುತ್ತೂರು ಜಾತ್ರಾಗದ್ದೆಯಿಂದ ಬೆಳ್ಳಿಪ್ಪಾಡಿ ಕಡೆಗೆ ಹೋಗುತ್ತಿದ್ದ ಧನರಾಜ್ ಅವರ ಬೈಕ್ ಪಡೀಲ್‌ನಲ್ಲಿ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಬಳಿಕ ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್‌ಗೂ ಢಿಕ್ಕಿಯಾಗಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವು ಸಂಭವಿಸಿದೆ. ಮತ್ತೊಂದು ಬೈಕ್‌ನಲ್ಲಿದ್ದ ಸವಾರ ಹಾಗೂ ಸಹಸವಾರನಿಗೂ ಗಾಯಗಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article