ಒಂದು ದಿನದ ಎನ್‌ಎಸ್‌ಎಸ್ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

ಒಂದು ದಿನದ ಎನ್‌ಎಸ್‌ಎಸ್ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಅಂಗವಾಗಿ ಕಡಬ ತಾಲೂಕಿನ ಕುಮಾರಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ದಿನದ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. 


ಬೆಳಗ್ಗೆ 9 ಗಂಟೆಯ ನಂತರ ಶಿಬಿರಾರ್ಥಿಗಳು ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿ ಶಾಲಾ ಆವರಣದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಡೆಸಿ ಪರಿಸರವನ್ನು ಶುದ್ಧಗೊಳಿಸಿದರು. 


ನಂತರ ನಡೆದ ಸಮಾರೋಪ ಸಮಾರಂಭದಲ್ಲಿ ಕುಮಾರಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಹೇಮಲತಾ ಅವರು ಅಧ್ಯಕ್ಷತೆ ವಹಿಸಿ, ಶಿಬಿರಾರ್ಥಿಗಳು ಕೈಗೊಂಡ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಮುಖ್ಯ ಅತಿಥಿಗಳಾಗಿ ಶಾಲೆಯ ಮುಖ್ಯಗುರು ಸಂತೋಷ್ ಎನ್.ಟಿ. ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. 

ಕಾರ್ಯಕ್ರಮದಲ್ಲಿ ಸವಣೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ್ ವೈ., ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹೇಶ್ ಕೆ. ಉಪಸ್ಥಿತರಿದ್ದರು. 

ಕಾಲೇಜಿನ ಸಂಯೋಜನಾಧಿಕಾರಿಗಳಾದ ಡಾ. ಕೆ. ಚಂದ್ರಶೇಖರ್ ಮತ್ತು ಪುಷ್ಪಾ ಎನ್. ಅವರು ಭಾಗವಹಿಸಿದರು. ಎನ್‌ಎಸ್‌ಎಸ್ ಕಾರ್ಯದರ್ಶಿ ವಿಷ್ಣುಜೀತ್ ನಿರೂಪಿಸಿ, ಚರಣ್ ಸ್ವಾಗತಿಸಿ ಹಾಗೂ ಘಟಕ ನಾಯಕಿ ಲವಿಕ ವಂದಿಸಿದರು. ಆಕಾಶ್, ಅರ್ಚನಾ, ಕೆವಿನ್, ಘಟಕ ನಾಯಕರಾದ ಮನೀಶ್ ಮತ್ತು ಮನ್ವಿತ್ ಸಹಕರಿಸಿದರು. 

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಹಾಗೂ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article