ಸಂತ ಫಿಲೋಮಿನಾ ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಸಂತ ಫಿಲೋಮಿನಾ ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಬೆಳ್ಳಿ ಹಬ್ಬ ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೆರೊ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಓದಿಗೆ ಸೀಮಿತವಾಗದೆ ಇಂತಹ ಎಲ್ಲಾ ಪಠ್ಯೇತರ ಚಟುವಟಿಕೆಗಳಲ್ಲೂ ಕ್ರೀಯಾಶೀಲರಾಗಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಸ್ನಾತಕೋತ್ತರ ವಿಭಾಗದ ವಿಧ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಶೀತಲ್ ಕುಮಾರ್ ಹಾಗೂ ಪೃಥ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿಧ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಒಟ್ಟು 24 ವಿವಿಧ ಕಾರ್ಯಕ್ರಮಗಳು ಪ್ರದರ್ಶನಗೊಂಡವು.

ಕಾಲೇಜಿನ ವಿವಿಧ ಸ್ನಾತಕೋತ್ತರ ವಿಭಾಗದ ಸಂಯೋಜಕರು ಹಾಗೂ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಥಮ ವರ್ಷದ ಗಣಿತ ಶಾಸ್ತ್ರ ವಿಭಾಗದ ವಿಧ್ಯಾರ್ಥಿನಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿದರು, ಸ್ವಾಗತಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article