ಕಾಲೇಜು ವಿದ್ಯಾರ್ಥಿಗೆ ತಂಡದಿಂದ ಹಲ್ಲೆ

ಕಾಲೇಜು ವಿದ್ಯಾರ್ಥಿಗೆ ತಂಡದಿಂದ ಹಲ್ಲೆ

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಐದಾರು ಜನರ ತಂಡವೊಂದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಬುಧವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಆದಿಲ್ ಹಲ್ಲೆಗೊಳಗಾದ ಕಾಲೇಜು ವಿದ್ಯಾರ್ಥಿ:

ಬುಧವಾರ ಸಂಜೆ ಆದಿಲ್ ತನ್ನ ಸ್ನೇಹಿತರಾದ ಸುಹೈಲ್ ಮತ್ತು ಅಝಾರ್ ರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪರಿಚಯಸ್ಥರಾದ ಬಿ.ಕೆ. ಮುಈನುದ್ದೀನ್, ಮುಆದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ. ತಡೆಯಲು ಯತ್ನಿಸಿದ ಸ್ನೇಹಿತರಿಗೂ ಬೆದರಿಕೆ ಹಾಕಿದ್ದಾರೆ.

ಕೆಲವು ತಿಂಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮುಈನುದ್ದೀನ್ ಮತ್ತು ತಂಡ ಹೊಡೆಯುತ್ತಿದ್ದ ವೇಳೆ ಆದಿಲ್ ಮಧ್ಯ ಪ್ರವೇಶಿಸಿ ಗಲಾಟೆ ಬಿಡಿಸಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಈಗ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಗಾಯಗೊಂಡ ಆದಿಲ್ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article