ದೇವಸ್ಥಾನದ ಡಬ್ಬಿ ಕಳ್ಳನ ಬಂಧನ

ದೇವಸ್ಥಾನದ ಡಬ್ಬಿ ಕಳ್ಳನ ಬಂಧನ


ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಆರೋಪಿ ಆಂದ್ರಪ್ರದೇಶದ ಪಶ್ಚಿಮ ಗೊದಾವರಿ ನಿವಾಸಿ ಮಹಮ್ಮದ್ ಸಲ್ಮಾನ್ (35) ಎಮದು ಗುರುತಿಸಲಾಗಿದೆ.

ಮಾ.30 ರಂದು ಸುಳ್ಯ ಠಾಣೆಯಲ್ಲಿ ಅ.ಕ್ರ 45/2026 ಕಲಂ 303(2)BNS -2023 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಯಿತು. ಏಪ್ರಿಲ್ 06 ಪೋಲೀಸರು ಆರೋಪಿಯನ್ನ ಬಂಧಿಸಿದ್ದಾರೆ. 

ಆರೋಪಿತನಿಂದ ಕಳವು ಮಾಡಿದ 2000 ರೂ ನಗದು ಹಣವನ್ನು ಸ್ವಾದೀನಪಡಿಸಿಕೊಂಡು, ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article