ಕಾರು-ಸ್ಕೂಟರ್ ಢಿಕ್ಕಿ: ಸವಾರ ಗಂಭೀರ

ಕಾರು-ಸ್ಕೂಟರ್ ಢಿಕ್ಕಿ: ಸವಾರ ಗಂಭೀರ

ಉಜಿರೆ: ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಧರ್ಮಸ್ಥಳ ಗ್ರಾಮದ ಬೊಳಿಯಾರ್‌ನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರ್‌ನಲ್ಲಿ ಏ.11 ರಂದು ಬೆಳಗ್ಗೆ 6.30 ರ ಸುಮಾರಿಗೆ ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿದೆ. 

ದ್ವಿಚಕ್ರ ವಾಹನ ಸವಾರ ಧರ್ಮಸ್ಥಳ ಗ್ರಾಮದ ದೊಂಡೊಲೆ ನಿವಾಸಿ ಅಶೋಕ್ ಭಟ್(65) ಎಂಬವರ ಕಾಲಿಗೆ ಗಂಭೀರ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article