ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್ ವತಿಯಿಂದ 6ನೇ ವರ್ಷದ ಅಂಬೇಡ್ಕರ್ ಜಯಂತಿ ಆಚರಣೆ
ಉಳ್ಳಾಲ ಪ್ರೆಸ್ ಕ್ಲಬ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ ಉದ್ಘಾಟಿಸಲಿದ್ದಾರೆ. ವಿಧಾನ ಸಭೆಯ ಸಭಾಧ್ಯಕ್ಷ ಡಾ. ಯು.ಟಿ. ಖಾದರ್ ಫರೀದ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಿದ್ದಾರೆ.
ಬೆಳ್ತಂಗಡಿಯ ಸತ್ಯ ಸಾರಮಾನಿ ಯುವ ವೇದಿಕೆ ತುಳುನಾಡು ಅಧ್ಯಕ್ಷ ರಘು ಧರ್ಮಸೇನ ಪ್ರಾಸ್ತಾವಿಕ ವಾಗಿ ಮಾತನಾಡಳಿದ್ದು ಟ್ರಸ್ಟ್ ಸ್ಥಾಪಕಾಧ್ಯಕ್ಷ ಯಾದವ ಅಸೈಗೋಳಿ ಅಧ್ಯಕ್ಷತೆ ವಹಿಸುವರು ಎಂದರು.
ಮುಖ್ಯ ಅತಿಥಿಗಳಾಗಿ ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ, ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಪಿ.ಎಲ್. ಧರ್ಮ, ಕ್ಷೇತ್ರ ಶಿಕ್ಷಣಾಧಿಕಾರಿ (ಮಂಗಳೂರು ವಲಯ) ಹೆಚ್.ಆರ್. ಈಶ್ವರ್, ಮುಡಿಸು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ, ರಸಮಂಜರಿ, ಮಿಕ್ಸ್ ಮಸಾಲೆ ಮನರಂಜನೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಲಾಗುತ್ತದೆ. ವಿವಿಧ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದವರಿಗೆ ಗೌರವ ಸಲ್ಲಿಸಲಾಗುವುದು.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು 8197684023 ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಬೇಕೆಂದು ಆಯೋಜಕರು ತಿಳಿಸಿದ್ದಾರೆ. ಉಚಿತ ಮನರಂಜನಾ ಕಾರ್ಯಕ್ರಮ ನೀಡಿರುವ ರಹಿಮಾನ್ ಕೊಣಾಜೆ ಅವರ ತಂಡಕ್ಕೂ ಈ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ಕುಂಟಾಲಗುರಿ ಸರಕಾರಿ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಚಂದಿಕಾ, ಟ್ರಸ್ಟಿಗಳಾದ ಸದಾನಂದ ಮಾಡೂರು, ರಹಿಮಾನ್ ಕೊಣಾಜೆ ಹಾಗೂ ಸಮಾಜ ಸೇವಕ ಯೋಗೀಶ್ ಉಪಸ್ಥಿತರಿದ್ದರು.