ಆರಿಫ್ ಕೊಲೆ ಪ್ರಕರಣ: ಪ್ರಮುಖ ಆರೋಪಿ ಬಂಧನ
Thursday, April 23, 2026
ಉಳ್ಳಾಲ: ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಆರಿಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿ, ಮೊಹಮ್ಮದ್ ಸೋಹೈಲ್ ಅಲಿಯಾಸ್ ‘ಚಿಯಾ’ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತನು ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಸಹಕಾರ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ವಿವರವಾದ ತನಿಖೆಯ ನಂತರ ಸೋಹೈಲ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆಯ ಪ್ರಕಾರ, ಫೆಬ್ರವರಿಯಲ್ಲಿ ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಬಳಸಿದ ಆಯುಧಗಳನ್ನು ಸೋಹೈಲ್ ಪೂರೈಸಿದ್ದ ಎಂದು ತಿಳಿದುಬಂದಿದೆ.
ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 10 ಜನರ ಬಂಧನ ಆಗಿತ್ತು. ಇದೀಗ ಮೊಹಮ್ಮದ್ ಸೊಹೇಲ್ ಯಾನೆ ಚಿಯಾ ಬಂಧಿಸಿದ್ದು, ಇದರಿಂದ ಬಂಧನದ ಸಂಖ್ಯೆ 11ಕ್ಕೆ ಏರಿದೆ.
ಆರೀಫ್ ಕೊಲೆ ಪ್ರಕರಣದಲ್ಲಿ 15 ಮಂದಿಯ ಪಾತ್ರ ಇರುವುದು ತನಿಖೆ ವೇಳೆ ಬೆಳಕಿಗೆ ಬಂದಿತ್ತು. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.