ಮೇ 12ರಂದು ಪಾಣೆಮಂಗಳೂರಿನಲ್ಲಿ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’

ಮೇ 12ರಂದು ಪಾಣೆಮಂಗಳೂರಿನಲ್ಲಿ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’


ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮ್ಮರ್ ಯು.ಎಚ್. ಹೇಳಿದರು.

ಬಿ.ಸಿ.ರೋಡಿನಲ್ಲಿರುವ ಸಮ್ಮೇಳನ ಸ್ವಾಗತ ಸಮಿತಿ ಕಚೇರಿಯಲ್ಲಿ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಷೆಯ ಹೆಸರಿನಲ್ಲಿ ಸಮುದಾಯ ಒಂದಾಗಬೇಕು ಎಂಬ ನಿಟ್ಟಿನಲ್ಲಿ ಸಮ್ಮೇಳನ ಆಯೋಜಸಲಾಗಿದೆ ಎಂದರು.

ಅಂದು ಬೆಳಗ್ಗೆ 9.30ಕ್ಕೆ ಶ್ರೀ ಶಾರದಾ ಪ್ರೌಢಶಾಲಾ ಬಳಿಯಿಂದ ಸಮ್ಮೇಳನ ಸಭಾಂಗಣದ ತನಕ ನಡೆಯಲಿರುವ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಗೌರವ ಸಲಹೆಗಾರ ಹಾಜಿ ಪಿ. ಮುಹಮ್ಮದ್ ರಫೀಕ್ ಉದ್ಘಾಟಿಸಲಿದ್ದು, 10 ಗಂಟೆಗೆ ಧ್ವಜಾರೋಹಣ ನಢಯಲಿದೆ ಎಂದರು.

ಬೆಳಗ್ಗೆ 10.30ಕ್ಕೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ಕವಿ, ಗಾಯಕ ರಹೀಂ ಬಿ.ಸಿ.ರೋಡು ಸಮ್ಮೇಳನಾಧ್ಯಕ್ಷರ ಭಾಷಣ ಮಾಡಲಿದ್ದಾರೆ. ಶಾಸಕ ಯು. ರಾಜೇಶ್ ನಾಯ್ಕ, ಉಮೈರತ್ ಕುಮೇರ್ ಅವರ ಬೈಲ್ ಮಲೆ (ಬ್ಯಾರಿ ಕಥಾಸಂಕಲನ) ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಹಾಜಿ ಬಿ.ಎಚ್. ಖಾದರ್, ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಾಕ್ಷ ಎಂ.ಎಸ್. ಮುಹಮ್ಮದ್, ಮೊಹಿದ್ದಿನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ. ಅಬ್ದುಲ್ ಸಲಾಂ ತುಂಬೆ, ಜನಪ್ರಿಯ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಅಬ್ದುಲ್ ಬಶೀರ್ ವಿ.ಕೆ., ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ. ಸೆನೆಟ್ ಸದಸ್ಯ ಡಾ. ಮುಸ್ತಪಾ ಬಸ್ತಿಕೋಡಿ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ರಾಝ್ ಎಚ್.ಐ., ಎ.ಜೆ. ಆಸ್ಪತ್ರೆಯ ಹಿರಿಯ ಸ್ಥಾನಿಕ ವೈದ್ಯೆ ಡಾ. ಹಸೀನಾ ಪೊನ್ನೋಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಮಾಹಿತಿ ನೀಡಿದರು.

ಮಧ್ಯಾಹ್ನ 12 ಗಂಟೆಗೆ ಸಮ್ಮೇಳನಾಧ್ಯಕ್ಷರ ಭಾಷಣದ ಮೇಲೆ ನಡೆಯಲಿರುವ ಚರ್ಚಾಗೋಷಿಯಲ್ಲಿ ಪತ್ರಕರ್ತ ಬಶೀರ್ ಅಡ್ಯನಡ್ಕ ನಿರೂಪಿಸಲಿದ್ದು, ತುಂಬೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಿ.ಬಿ. ಅಬ್ದುಲ್ ರಹಿಮಾನ್, ಲೇಖಕಿ, ಕವಯತ್ರಿ ಆಯಿಷಾ ಯು.ಕೆ, ಯೇನಪೋಯ ಪದವಿ ಕಾಲೇಜಿನ ಪ್ರಾಧ್ಯಾಪಕ ಮುಹಮ್ಮದ್ ಶಾಹಿದ್ ವಳವೂರು ಭಾಗವಹಿಸಲಿದ್ದಾರೆ. 

ಮಧ್ಯಾಹ್ನ 2 ಗಂಟೆಯಿಂದ ಬ್ಯಾರಿ ಕವಿಗೋಷ್ಠಿ ನಡೆಯಲಿದೆ. ಸಂಜೆ 4.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಡಾ. ಎಂ.ಎಂ. ಶರೀಫ್, ಅಬ್ಬೋನು ನಂದಾವರ, ಅವ್ವಮ್ಮ ಒಕ್ಕೆತ್ತೂರು, ಅಬ್ದುಲ್ ಖಾದರ್ (ಮೋನುಣ್ಣಿ) ಕಲ್ಲಡ್ಕ, ಇಸ್ಮಾಯಿಲ್ ಅರಬಿ ಬಂಟ್ವಾಳ, ಮೊಹಮ್ಮದ್ ಕೋಡಪದವು, ಝುಬೈದಾ ಪರ್ಲೊಟ್ಟು ಸನ್ಮಾನ ಸ್ವೀಕರಿಸಲಿದ್ದಾರೆ ಎಂದರು.

ಮಾಜಿ ಸಚಿವ ಬಿ ರಮಾನಾಥ ರೈ, ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಹಾಜಿ ಜಿ.ಎ. ಬಾವಾ, ಪೂನಾದ ಡಾ. ಡಿ.ವೈ. ಪಾಟೀಲ್ ವಿ.ವಿ.ಯ ಕುಲಸಚಿವ ಡಾ. ಬಿ.ಎಂ. ಬೀರಾನ್ ಮೊಹಿದಿನ್, ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಹಾಜಿ ಉಸ್ಮಾನ್ ಕರೋಪಾಡಿ, ಹಿರಿಯ ಪತ್ರಕರ್ತ ಇಬ್ರಾಹಿಂ ಅಡ್ಕಸ್ಥಳ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಜಾಕ್ ಅನಂತಾಡಿ ಸಮಾರೋಪ ಭಾಷಣ ಮಾಡಲಿದ್ದಾರೆ. ಸಮ್ಮೇಳನದಲ್ಲಿ ದಫ್, ಬ್ಯಾರಿ ಹಾಡುಗಳ ಸಂಭ್ರಮ ನಡೆಯಲಿದೆ ಎಂದರು.

ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಬಂಟ್ವಾಳ ಬ್ಯಾರಿ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎಂ. ಅಬ್ಬಾಸ್ ಅಲಿ, ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಅಬುಬಕರ್ ಅನಿಲಕಟ್ಟೆ, ತಾಲೂಕು ಸಮ್ಮೇಳನ ಕೋಶಾಧಿಕಾರಿ ಹಂಝ ಬಸ್ತಿಕೋಡಿ, ಬ್ಯಾರಿ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ನೇರಳಕಟ್ಟೆ, ಕೋಶಾಧಿಕಾರಿ ಮಹಮ್ಮದ್ ಸಾಗರ್, ಉಪಾಧ್ಯಕ್ಷರಾದ ಯೂಸುಫ್ ಕರಂದಾಡಿ, ಯು.ಮುಸ್ತಫಾ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಎಂ.ಅಶ್ರಫ್, ವೇದಿಕೆ ಸಮಿತ ಸಂಚಾಲಕ ಪಿ. ಮಹಮ್ಮದ್ ಪಾಣೆಮಂಗಳೂರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article