ಖೋಟಾ ನೋಟು ಚಲಾವಣೆಗೆ ಯತ್ನ: ಇಬ್ಬರ ಬಂಧನ, ಕಾರು, ಐನೂರು ಮುಖಬೆಲೆಯ ನೋಟು ವಶ

ಖೋಟಾ ನೋಟು ಚಲಾವಣೆಗೆ ಯತ್ನ: ಇಬ್ಬರ ಬಂಧನ, ಕಾರು, ಐನೂರು ಮುಖಬೆಲೆಯ ನೋಟು ವಶ

ಬಂಟ್ವಾಳ: ತಾಲೂಕಿನ ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟು ಚಲಾವಣೆಗೆ ಯತ್ನಿಸಿರುವ ಪ್ರಕರಣವನ್ನು ಬೇಧಿಸಿರುವ ಪುಂಜಾಲಕಟ್ಟೆ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.

ಬಂಧಿತರನ್ನು ಮುಹಮ್ಮದ್ ಸಮೀರ್ (28) ಹಾಗೂ ಮಹಮ್ಮದ್ ಇರ್ಪಾನ್ (26) ಎಂದು ಹೆಸರಿಸಲಾಗಿದ್ದು, ರಶೀದ್ ಕುಂಡಡ್ಕ ಎಂಬಾತ ಸದ್ಯ ತಲೆ ಮರೆಸಿದ್ದಾನೆ.

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಶೀಪ್ಟ್ ಕಾರು, 2,38 ಲಕ್ಷ ರೂ. ಮೌಲ್ಯದ 500 ರೂ ಮುಖಬೆಲೆಯ 05 ಖೋಟಾ ನೋಟುಗಳ ಕಟ್ಟು,೩ ಮೊಬೈಲ್ ಪೋನ್‌ಗಳನ್ನು ಪೊಲೀಸರು ವಶಪಡಿಸಿದ್ದು, ಸೊತ್ತುಗಳ ಒಟ್ಟು ಮೌಲ್ಯ 7.96 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿತಗಳು ಅಕ್ರಮವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಖಚಿತ ಮಾಹಿತಿಯ ಮೇರೆಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪಿ.ಎಸ್.ಐ. ರಾಜೇಶ್ ಕೆ.ವಿ. ಮತ್ತವರ ಸಿಬ್ಬಂದಿಗಳು ಮೇ1 ರಂದು ಮದ್ಯಾಹ್ನ 3.30 ಗಂಟೆಯ ವೇಳೆಗೆ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಚಲಾವಣಾ ಯತ್ನ ಜಾಲವನ್ನು ಪತ್ತೆ ಹಚ್ಚಿದ್ದಾರೆ.

ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ತಲೆ ಮರೆಸಿರುವ ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article