ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧಿ ಕಾಂಗ್ರೆಸ್‌ನಿಂದ ಪ್ರತಿಭಟನೆ
ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಹಾಗೂ ಎನ್‌ಡಿಎ ಸರಕಾರದ ಅವಧಿಯಲ್ಲಿನ ಕಚ್ಚಾತೈಲದ ಬೆಲೆಯ ಬಗ್ಗೆ ಸಾರ್ವಜನಿಕರು ಅವಲೋಕನ ಮಾಡಬೇಕಾಗಿದೆ ಎಂದು ಹೇಳಿದರು.
ಮೋದಿ ಏನು ಮಾಡಿದರೂ ಸರಿ ಎನ್ನುವ ಭಕ್ತರು, ಮೂರ್ಖರು ಇಲ್ಲಿ ಇದ್ದಾರೆ ಎಂದು ಲೇವಡಿ ಮಾಡಿದ ಅವರು ಜನತೆ ಸತ್ಯಾಸತ್ಯತೆ ಬಗ್ಗೆ ವಿಮರ್ಶಿಸಬೇಕು ಎಂದರು.
ಕಾಂಗ್ರೆಸ್ ಮುಖಂಡ ಎಂ.ಜಿ. ಹೆಗಡೆ ಮಾತನಾಡಿ, ಮೋದಿ ಸರ್ಕಾರ ಸರ್ವಾಧಿಕಾರಿದ ಮನಸ್ಥಿತಿಯಲ್ಲಿದ್ದು, ಪ್ರಶ್ನೆ ಕೇಳುವರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಮಾತನಾಡಿ, ಜನಸಾಮಾನ್ಯರು ಬೆಲೆಏರಿಕೆಯಿಂದ ತತ್ತರಿಸಿಹೋದರೆ, ದೇಶದ ಪ್ರಧಾನಿ ವಿದೇಶ ಪ್ರವಾಸದ ಮೋಜಿನಲ್ಲಿ ಇರುವುದು ನ್ಯಾಯನಾ? ಎಂದು ಪ್ರಶ್ನಿಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಜ.ಪಂ. ಮಾಜಿ ಸದಸ್ಯ ಪದ್ಮಶೇಖರ್ ಜೈನ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ತಾ.ಪಂ. ಮಾಜಿ ಅಧ್ಯಕ್ಷ ಪದ್ಮನಾಭ ರೈ, ಪಕ್ಷದ ಮುಖಂಡರಾದ ಸುದೀಪ್ ಕುಮಾರ್ ಶೆಟ್ಟಿ, ಚಂದ್ರಶೇಖರ ಭಂಡಾರಿ, ಬಾಲಕೃಷ್ಣ ಅಂಚನ್, ಸಂಜೀವ ಪೂಜಾರಿ, ಸದಾಶಿವ ಬಂಗೇರ, ಜಯಂತಿ ಪೂಜಾರಿ, ಮಧುಸೂದನ್, ಶೈಲಜಾ ರಾಜೇಶ್, ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮಹಮ್ಮದ್ ನಂದಾವರ, ಚಿತ್ತರಂಜನ್ ಶೆಟ್ಟಿ, ವಾಸು ಪೂಜಾರಿ, ಮೋಹನ್ ಶೆಟ್ಟಿ, ವೆಂಕಪ್ಪ ಪೂಜಾರಿ, ನಿರಂಜನ್ ರೈ, ಜಗದೀಶ್ ಕುಂದರ್, ಶೈಲೇಶ್ ಪೂಜಾರಿ, ಸಿದ್ದೀಕ್ ಬೋಗೊಡಿ, ಇಬ್ರಾಹಿಂ ನವಾಜ್, ಉಮೇಶ್ ನರಿಕೊಂಬು, ಮಹಮ್ಮದ್ ಶರೀಫ್, ಕುಶಲ ಪೆರಾಜೆ ಮತ್ತಿತರರು ಉಪಸ್ಥಿತರಿದ್ದರು.
