ತಾಲೂಕು ಹಂತದ ಮಕ್ಕಳ ದಾಖಲಾತಿ ಆಂದೋಲನಕ್ಕೆ ಚಾಲನೆ
Friday, May 15, 2026
ಬಂಟ್ವಾಳ: ಇಲ್ಲಿನ ಕ್ಷೇತ್ರ ಶಿಕ್ಷಣ ಇಲಾಖಾ ವತಿಯಿಂದ ಬಿ.ಸಿ.ರೋಡಿನ ಕೊಡಂಗೆ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27 ನೇ ಸಾಲಿನ ತಾಲೂಕು ಹಂತದ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಬಂಟ್ವಾಳ ಕ್ಷೇತ್ರ ಪ್ರಭಾರ ಶಿಕ್ಷಣಾಧಿಕಾರಿ ಮಾಲತಿ ಅವರು ಸರ್ಕಾರದ ಈ ಮಹತ್ವಕಾಂಕ್ಷೆಯ ಯೋಜನೆಯ ಕುರಿತು ಮಾಹಿತಿಯನ್ನು ನೀಡಿದರಲ್ಲದೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಪೋಷಕ ಕ್ರಿಯಾಯೋಜನೆ ರೂಪಿಸಲು ಮಾರ್ಗದರ್ಶನ ನೀಡಿದರು.
ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ವಿದ್ಯಾ, ಶಿಕ್ಷಣ ಸಂಯೋಜಕರಾದ ಪ್ರತಿಮಾ ಮತ್ತು ಸುಧಾ, ಕೊಡಂಗೆ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸುಧೀರ್ ಜಿ., ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪಾಲಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು.
ಈ ಸಂದರ್ಭ ಸ್ಥಳೀಯ ಪರಿಸರದಲ್ಲಿ ಜಾಥ ನಡೆಸಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಮನವೊಲಿಸಲಾಯಿತು. ಕೊಡಂಗೆ ಶಾಲೆಯ ವಿವಿಧ ತರಗತಿಗಳಿಗೆ ಈವರೆಗೆ 65 ಮಕ್ಕಳು ದಾಖಲಾಗಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ಸುಗುಣ ಸ್ವಾಗತಿಸಿದರು.