ಗುಜರಿ ಸಾಗಿಸುತ್ತಿದ್ದ ಲಾರಿಯಲ್ಲಿ ಹಠಾತ್ ಬೆಂಕಿ
Monday, May 18, 2026
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್‌ನಲ್ಲಿ ಸಂಚರಿಸುತ್ತಿದ್ದ ಲಾರಿಯೊಂದರಲ್ಲಿ ದಿಢೀರ್ ಬೆಂಕಿ ಹೊತ್ತಿಕೊಂಡು ವಸ್ತುಗಳೆಲ್ಲವೂ ಬೆಂಕಿಗಾಹುತಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗುಜರಿ ವಸ್ತುಗಳನ್ನು ಹೇರಿಕೊಂಡು ಸಂಚರಿಸುತ್ತಿದ್ದ ಲಾರಿಯೊಳಗೆ ಸಮಸ್ಯೆ ಉಂಟಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಲಾರಿಯೊಳಗಿದ್ದ ಗುಜರಿ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುಜಿರಿಯಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಈ ಘಟನೆ ನಡೆದಿರಬೇಕೆಂದು ಶಂಕಿಸಲಾಗಿದೆ.