ಚರಂಡಿಗೆ ಬಿದ್ದ ಕಾರು
Tuesday, May 5, 2026
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡು ವಿಲ್ಲಾಪುರ ರಸ್ತೆಯ ಬಂಟ್ವಾಳ ಸಮೀಪದ ಪೊಯ್ಲೋಡಿ ಎಂಬಲ್ಲಿ ನಡೆದಿದೆ.
ಘಟನೆಯಿಂದ ಚಿಕ್ಕಮಂಗಳೂರು ನಿವಾಸಿ ಲಕ್ಷಣ್ ಗೌಡ ಅವರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.