ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆ
Monday, May 18, 2026
ಬೆಳ್ತಂಗಡಿ: ಮಹಿಳೆಯೊಬ್ಬರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ ಮೇ.15 ರಂದು ನಡೆದಿದೆ.
ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತಪಟ್ಟ ಮಹಿಳೆಯನ್ನು ಸಂದ್ಯಾ (27) ಎಂದು ಗುರುತಿಸಲಾಗಿದೆ. ಮೃತ ಮಹಿಳೆಯ ಸಹೋದರ ಮೇ.16 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ನೀಡಿದ ದೂರಿನನ್ವಯ ಆಕೆಯ ಪತಿ ಧನಂಜಯ್ ಎಂಬಾತನ ಮೇಲೆ ವರದಕ್ಷಿಣೆ ನಿಷೇಧ ಕಾಯಿದೆ ಅಡಿ ಪ್ರಕರಣ ದಾಖಲಾಗಿದ್ದು, ಆತನನ್ನು ಪೊಲೀಸರು ಮೇ. 17 ರಂದು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.