ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಮೂವರ ಸೆರೆ

ವಿದ್ಯಾರ್ಥಿನಿಯರೊಂದಿಗೆ ಅನುಚಿತ ವರ್ತನೆ: ಮೂವರ ಸೆರೆ

ಬೆಳ್ತಂಗಡಿ: ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು, ಮೂವರು ಯುವಕರ ಜೊತೆಗೆ ಬೆಳ್ತಂಗಡಿಯ ದಿಡುಪೆ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಮೂವರು ಯುವಕರು ಅನುಚಿತ ವರ್ತನೆ ತೋರಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಹಾಗೂ ಉಸ್ಮಾನ್ ಸಾಲೀಂ (18) ಬಂಧಿತರು.

ಮೇ.20ರಂದು ಆರು ಜನ ಬೆಳ್ತಂಗಡಿ ತಾಲೂಕಿನ ದಿಡುಪೆ ಜಲಪಾತಕ್ಕೆ ತೆರಳಿದ್ದರು. ಈ ವೇಳೆ ಮೂವರು ಯುವಕರು ತಮ್ಮೊಂದಿಗಿದ್ದ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಯುವತಿಯರು ಆಗ ಪ್ರತಿರೋಧಿಸಿ ಬೊಬ್ಬೆ ಹಾಕಿದಾಗ ಸ್ಥಳದಲ್ಲಿದ್ದ ಸಾರ್ವಜನಿಕರು ಮೂವರು ಯುವಕರನ್ನು ಹಿಡಿದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿರುತ್ತಾರೆ. 

ಬಳಿಕ ಬೆಳ್ತಂಗಡಿ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು ಮೂವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ. 

ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಯುವಕರು ಬಳಸಿದ್ದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article