ದ್ವಿಚಕ್ರ ವಾಹನಕ್ಕೆ ಕ್ರೇನ್ ಢಿಕ್ಕಿ: ಸವಾರ ಸಾವು
Tuesday, May 5, 2026
ಬೆಳ್ತಂಗಡಿ: ದ್ವಿಚಕ್ರ ವಾಹನದ ಹಿಂಭಾಗಕ್ಕೆ ಕ್ರೇನ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲು ಪೇಟೆಯಲ್ಲಿ ಮೇ.5ರಂದು ನಡೆದಿದೆ.
ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತ ಬೈಕ್ ಸವಾರ.
ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.
ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.