ಒಂಟಿ ಸಲಗ ಪ್ರತ್ಯಕ್ಷ: ಟ್ರಾಫಿಕ್ ಜಾಮ್
Monday, May 11, 2026
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷಗೊಂಡಿದ್ದರಿಂದ ಸುಮಾರು ಒಂದು ಗಂಟೆಗೂ ಅಧಿಕ ಸಮಯ ಟ್ರಾಫಿಕ್ ಜಾಮ್ ಉಂಟಾದ ಘಟನೆ ಸೋಮವಾರ ನಡೆದಿದೆ.
ಸೋಮವಾರ ಬೆಳಗ್ಗೆ ಚಾರ್ಮಾಡಿ ಘಾಟ್ ರಸ್ತೆಯ 10ನೇ ತಿರುವಿನಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದೆ.
ರಸ್ತೆ ಮಧ್ಯೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಾಡಾನೆ ನಿಂತಿತ್ತು. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸುಮಾರು ಒಂದು ಗಂಟೆ ಕಾಲ ವಾಹನ ಸವಾರರ ಪರದಾಡುವಂತಾಗಿತ್ತು. ಬಳಿಕ ಆನೆ ಕಾಡಿನತ್ತ ತೆರಳಿತು.