ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ
Monday, May 11, 2026
ಧರ್ಮಸ್ಥಳ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.