ಬಿಜೆಪಿ ಸರ್ಕಾರ ಮಾಡಿದ ತಪ್ಪು ಸರಿಪಡಿಸಲು ಯತ್ನ: ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ದಂಡ ಮತ್ತು ಇತರ ಶುಲ್ಕವನ್ನು ಪಾವತಿಸಬೇಕಾಗಿದೆ. ಪ್ರಸ್ತುತ ಹೈಕೋರ್ಟ್ ಈ ಸಂಬಂಧ ನಿರ್ದೇಶನ ನೀಡಿದ್ದು, ನ್ಯಾಯಾಲಯದ ಆದೇಶದಂತೆ ಸರ್ಕಾರ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸಸಿ ನೆಟ್ಟು ನೀರೇರದರು.
ಮುಂಚೂಣಿ ಸಿಬ್ಬಂದಿಗೆ ಸುರಕ್ಷತಾ ಸಲಕರಣೆ:
ಅರಣ್ಯ ರಕ್ಷಣೆಯಲ್ಲಿ ಮುಂಚೂಣಿ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದ್ದು, ಅವರ ಸುರಕ್ಷತೆಗಾಗಿ ವಿದ್ಯುತ್ ಪ್ರವಹಿಸುವ ಕೈಗೋಲು ಮಳೆಯಿಂದ ರಕ್ಷಿಸುವ ಜಾಕೆಟ್, ಶೂ ಇತ್ಯಾದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
ಕಾರ್ಕಳದಲ್ಲಿಂದು ವಲಯ ಅರಣ್ಯಾಧಿಕಾರಿಗಳ ಕಚೇರಿ ಉದ್ಘಾಟಿಸಿದ ತರುವಾಯ ಅರಣ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಒದಗಿಸಲಾಗಿರುವ ಆಧುನಿಕ ಮತ್ತು ಹಗುರ ಬಂದೂಕುಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮುಂಚೂಣಿ ಸಿಬ್ಬಂದಿಯ ಸುರಕ್ಷತೆಗೂ ಗಮನ ಹರಿಸುವಂತೆ ತಿಳಿಸಿದರು.
ಆನೆ ಕಾರ್ಯಪಡೆ, ಕಳ್ಳಬೇಟೆ ನಿಗ್ರಹ ಪಡೆ, ಮುಂಜೂಣಿ ಸಿಬ್ಬಂದಿಗಳಿಗೆ ವಸತಿಗೃಹಗಳನ್ನು ನೀಡಲಾಗಿದೆಯೇ ಎಂದೂ ಪ್ರಶ್ನಿಸಿದ ಸಚಿವರು, ಕಷ್ಟಪಟ್ಟು ಅಪಾಯದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅಪಾಯಭತ್ಯೆ (ರಿಸ್ಕ್ ಅಲೊಯನ್ಸ್) ನೀಡಲಾಗುತ್ತಿದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಅರಣ್ಯ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕರಿಕಾಲನ್, ಕುದುರೆಮುಖ ವನ್ಯಜೀವಿ ವಿಭಾಗ ಡಿಎಫ್ಒ ಸಿವರಾಮ್ ಬಾಬು, ಕುಂದಾಪುರ ಉಪ ವಿಭಾಗ ಡಿಎಫ್‌ಒ ರುದ್ರನ್, ಎಸಿಎಫ್ ಪಿ. ಶ್ರೀಧರ್, ಸತೀಶ್ ಎನ್., ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್., ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ,
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್,
ಶ್ರೀ ನಾರಾಯಣ ಗುರು ನಿಗಮ ಮಂಡಳಿ ಅಧ್ಯಕ್ಷ ಮಂಜುನಾಥ್ ಪೂಜಾರಿ, ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.


