ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ: ವಿದ್ಯಾರ್ಥಿ ಸಾವು

ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ: ವಿದ್ಯಾರ್ಥಿ ಸಾವು

ಕಾಸರಗೋಡು: ಸ್ಕೂಟರ್ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಉಳಿಯ ತ್ತಡ್ಕ - ಚೌಕಿ ರಸ್ತೆಯ ಆಝಾದ್ ನಗರದಲ್ಲಿ ನಡೆದಿದೆ. 

ಸ್ಕೂಟರ್ ಸವಾರ ಆಝಾದ್ ನಗರದ ಶಹಬಾಸ್ ಹಸನ್ (17) ಮೃತಪಟ್ಟವರು . ಜೊತೆಗಿದ್ದ ಇನ್ನೊಬ್ಬ ಸವಾರ ಹಾಗೂ ಬೈಕ್ ನಲ್ಲಿದ್ದ ಇತರ ಇಬ್ಬರು ಗಾಯಗೊಂಡಿದ್ದು,ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಸನ್ ಉದಯ ಗಿರಿಯಲ್ಲಿರುವ ಕೇಂದ್ರ ವಿದ್ಯಾಲಯದ ವಿದ್ಯಾರ್ಥಿ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೃತದೇಹ ವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article