ಮೇ. 11ರಿಂದ 16 ರವರೆಗೆ ಚಿಣ್ಣರ ಕಲರವ-2026 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ
ಮಂಗಳೂರು: ಚಿಣ್ಣರ ಚಾವಡಿ ಮಂಗಳೂರು ಹಾಗೂ ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಜಂಟಿ ಆಶ್ರಯದಲ್ಲಿ ಸಂತ ಅಲೋಶಿಯಸ್ ಹೈಸ್ಕೂಲ್ ಇದರ ಸಹಕಾರದೊಂದಿಗೆ ಮೇ. 11 ರಿಂದ 16ರವರೆಗೆ ಸಂತ ಅಲೋಶಿಯಸ್ ಹೈಸ್ಕೂಲ್ ಸಭಾಂಗಣದಲ್ಲಿ ಚಿಣ್ಣರ ಕಲರವ-2026 ಮಕ್ಕಳ ಸಂತಸ ಕಲಿಕಾ ಕಾರ್ಯಾಗಾರ ನಡೆಯಲಿದೆ ಎಂದು ಸಿಐಟಿಯು ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ. 11ರಂದು ಬೆಳಗ್ಗೆ 9.30ಕ್ಕೆ ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಉದ್ಘಾಟನೆಯನ್ನು ಸಂತ ಅಲೋಶಿಯಸ್ ಹೈಸ್ಕೂಲ್ ನ ಮುಖ್ಯೋಪಾಧ್ಯಾಯರಾದ ರೆ.ಫಾ. ಜೋನ್ಸನ್ ಪಿಂಟೋ ಎಸ್.ಜೆ ಅವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ನ ಅಧ್ಯಕ್ಷ ಸಂತೋಷ್ ಡಿಸೋಜ, ಜಿಲ್ಲಾ ಯುವಜನ ಮುಖಂಡ ಮೆರಿಲ್ ರೇಗೋ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷ ಅಶೋಕನ್ ಬೋಳಾರ, ಜಿಲ್ಲಾ ಮಾಜಿ ವಿದ್ಯಾರ್ಥಿ ನಾಯಕ ಮೆಲ್ವಿನ್ ಪಾಯಸ್, ಶಿಬಿರದ ನಿರ್ದೇಶಕರೂ, ರಂಗಕಲಾವಿದರಾದ ಪ್ರವೀಣ್ ವಿಸ್ಮಯ ಬಜಾಲ್ ಅವರು ಭಾಗವಹಿಸಲಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋರವರು ವಹಿಸಲಿದ್ದಾರೆ.
ಮೇ 16ರಂದು ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ಜರುಗಲಿದ್ದು, ಸಮಾರೋಪ ಭಾಷಣವನ್ನು ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೋರವರು ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಸ್ನೇಹಾಲಯದ ಮುಖ್ಯಸ್ಥ ಜೋಸೆಫ್ ಕ್ರಾಸ್ತಾ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯ ಉಪಾಧ್ಯಕ್ಷ ಉರ್ಬನ್ ಪಿಂಟೋ, ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಗೌರವ ಸಲಹೆಗಾರ ಫ್ಲೇವಿಕ್ರಾಸ್ತಾ ಅತ್ತಾವರ, ಯುವ ವಕೀಲರೂ, ಮಾಜಿ ವಿದ್ಯಾರ್ಥಿ ನಾಯಕ ನಿತಿನ್ ಕುತ್ತಾರ್ ಅವರು ಭಾಗವಹಿಸಲಿದ್ದಾರೆ.
ಸಭೆಯ ಅಧ್ಯಕ್ಷತೆಯನ್ನು ಚಿಣ್ಣರ ಚಾವಡಿ ತಂಡದ ಅಧ್ಯಕ್ಷೆ ಪೂರ್ವಿ ಶೆಟ್ಟಿಯವರು ವಹಿಸಲಿದ್ದಾರೆ.
ಕಾರ್ಯಾಗಾರದಲ್ಲಿ 5ನೇ ತರಗತಿಯಿಂದ ಮೇಲ್ಪಟ್ಟು ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ಮೊದಲು ಅರ್ಜಿ ನೀಡಿದ 80 ಮಂದಿ ವಿದ್ಯಾರ್ಥಿಗಳಿಗೆ ಮಾತ್ರವೇ ಅವಕಾಶವಿದೆ. ಆಸಕ್ತರು ಮೇ 11ರಂದು ಬೆಳಗ್ಗೆ 8.30ಕ್ಕೆ ಸಂತ ಅಲೋಶಿಯಸ್ ಹೈಸ್ಕೂಲ್ ಸಭಾಂಗಣದಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ.: 9448503739, 9964186046, 9845214825ಗೆ ಸಂಪರ್ಕಿಸಬೇಕೆಂದು ಉಭಯ ಸಂಘಟನೆಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.