ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ: ಅಗಲಿದವರಿಗೆ ಶ್ರದ್ಧಾಂಜಲಿ

ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ: ಅಗಲಿದವರಿಗೆ ಶ್ರದ್ಧಾಂಜಲಿ


ಮಂಗಳೂರು: ಮಂಗಳೂರು ವಿಮಾನ ದುರಂತ ಘಟಿಸಿ ಇಂದಿಗೆ 16 ವರ್ಷ ಆಗಿದೆ. ಈ ಹಿನ್ನೆಲೆಯಲ್ಲಿ ಅಗಲಿದವರಿಗೆ ಜಿಲ್ಲಾಡಳಿತದಿಂದ ತಣ್ಣೀರುಬಾವಿಯ ಹುತಾತ್ಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಸೇರಿದಂತೆ ಹಲವರು ಪುಷ್ಪ ನಮನ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ ದುಬೈನಿಂದ ಬಂದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ರನ್ ವೇಯಲ್ಲಿ ನಿಲ್ಲದೇ ಸೂಚನಾ ಗೋಪುರದ ಕಂಬಗಳಿಗೆ ಡಿಕ್ಕಿಯಾಗಿತ್ತು. ಈ ವೇಳೆ ಅದು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ದುರಂತ ಸಂಭವಿಸಿತ್ತು. ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅಪಘಾತದಲ್ಲಿ 158 ಮಂದಿ ಸಾವನ್ನಪ್ಪಿದ್ದು, 8 ಮಂದಿ ಬದುಕುಳಿದಿದ್ದರು.

ಸಾವನ್ನಪ್ಪಿದ 158 ಮಂದಿಯಲ್ಲಿ 12 ಮಂದಿಯ ಮೃತದೇಹದ ಗುರುತು ಪತ್ತೆಯಾಗಿರಲಿಲ್ಲ. ಗುರುತು ಪತ್ತೆಯಾಗದವರ ಮೃತದೇಹವನ್ನು ತಣ್ಣೀರು ಬಾವಿಯ ನದಿ ತೀರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗಿತ್ತು. ಆ ಬಳಿಕ ಇದೇ ಸ್ಥಳದಲ್ಲಿ ಸ್ಮಾರಕವೊಂದನ್ನು ನಿರ್ಮಿಸಲಾಗಿತ್ತು. ಇಂದು ಆದೇ ಸ್ಥಳದಲ್ಲಿ ಜಿಲ್ಲಾಡಳಿತದಿಂದ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿಮಾನದಲ್ಲಿ 127 ಮಂದಿ ವಯಸ್ಕರು, 19 ಮಕ್ಕಳು, 4 ಶಿಶುಗಳು, 6 ಮಂದಿ ವಿಮಾನ ಸಿಬ್ಬಂದಿಗಳಿದ್ದರು. ಈ ವಿಮಾನದಲ್ಲಿ 166 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ದುರಂತ ಸಂದರ್ಭದಲ್ಲಿ 8 ಮಂದಿ ಪಾರಾಗಿದ್ದರು.

ದುಬೈನಿಂದ ರಾತ್ರಿ 1.20ಕ್ಕೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಹೊರಟಿತ್ತು. ಬೆಳಗ್ಗೆ ಸುರಕ್ಷಿತವಾಗಿ ಮಂಗಳೂರು ತಲುಪಬೇಕಿತ್ತು. ಆದರೆ, ಮಂಗಳೂರಿನ ಹೊರವಲಯದ ಕೆಂಜಾರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಸಂದರ್ಭ ಟೇಬಲ್ ಟಾಪ್ ಲ್ಯಾಂಡಿಂಗ್‌ನಲ್ಲಿ ಲೆಕ್ಕಾಚಾರ ತಪ್ಪಿ ಸೂಚನಾ ಗೋಪುರಕ್ಕೆ ಢಿಕ್ಕಿ ಹೊಡೆದು ರನ್ ವೇಯಿಂದ ಜಾರಿ ಕಣಿವೆಗೆ ಭಾರಿ ಸದ್ದಿನೊಂದಿಗೆ ಬಿದ್ದಿತ್ತು. ಇಬ್ಭಾಗಗೊಂಡ ವಿಮಾನದಿಂದ ಎಂಟು ಮಂದಿ ಜಿಗಿದು ಪಾರಾಗಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article