ಮೇ.23 ರಂದು ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ನಾಲ್ಕು ಭವ್ಯ ಸಭಾಭವನಗಳ ಲೋಕಾರ್ಪಣೆ: ಕೃಷ್ಣ ಜೆ. ಪಾಲೇಮಾರ್
ಕೈಗೆಟಕುವ ದರದಲ್ಲಿ ಲಭ್ಯ:
ಕರಾವಳಿಯ ಸಾಂಸ್ಕೃತಿಕ ಶ್ರೀಮಂತಿಕೆಗೆ ಒತ್ತು ನೀಡುವುದು ಮತ್ತು ಇಲ್ಲಿನ ಜನರಿಗೆ ಸುಲಭವಾಗಿ ಕೈಗೆಟಕುವ ದರದಲ್ಲಿ ಅತ್ಯುನ್ನತ ಸೌಲಭ್ಯಗಳ ಸಭಾಂಗಣಗಳನ್ನು ಒದಗಿಸುವುದು ಇದರ ಮೂಲ ಉದ್ದೇಶವಾಗಿದೆ. ಈ ಸಭಾಭವನಗಳು ವಿವಾಹ ಕಾರ್ಯಕ್ರಮಗಳು, ಸಾಮೂಹಿಕ ವಿವಾಹಗಳು, ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳು, ಉದ್ಯೋಗ ಮೇಳಗಳು, ವಸ್ತು ಪ್ರದರ್ಶನಗಳು, ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಮಹಿಳಾ ಸಬಲೀಕರಣದಂತಹ ಸಮಾಜಮುಖಿ ಚಟುವಟಿಕೆಗಳಿಗೆ ಮುಕ್ತವಾಗಿರಲಿವೆ ಎಂದರು.
ಸಾಮೂಹಿಕ ಕಾರ್ಯಕ್ರಮಗಳಿಗೆ ಉಚಿತ:
ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಸದಾ ಸಾಮಾಜಿಕ ಕಳಕಳಿಗೆ ಹೆಸರುವಾಸಿಯಾಗಿದೆ. ಜಾತಿ, ಧರ್ಮ, ಬಡವ-ಬಲ್ಲಿದ ಎಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವುದು ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ. ಈ ಸಾಮಾಜಿಕ ಬದ್ಧತೆಯ ಭಾಗವಾಗಿ, ಸಮಾಜದ ಒಳಿತಿಗಾಗಿ ಆಯೋಜಿಸುವ ಸಾಮೂಹಿಕ ವಿವಾಹಗಳು ಹಾಗೂ ಸದುದ್ದೇಶದ ಉದಾತ್ತ ಸಾರ್ವಜನಿಕ ಕಾರ್ಯಕ್ರಮಗಳಿಗೆ ಈ ಎಲ್ಲ ಸಭಾಂಗಣಗಳನ್ನು ನಿಯಮಾನುಸಾರವಾಗಿ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ ಎಂದರು.
ನಾಲ್ಕು ಸಭಾಭವನಗಳ ವಿಶಿಷ್ಟತೆ, ಅತ್ಯಾಧುನಿಕ ಸೌಲಭ್ಯಗಳು:
ಪ್ರತಿಯೊಂದು ಸಭಾಭವನವನ್ನು ಅತ್ಯಂತ ಚಿಂತನಶೀಲವಾಗಿ ರೂಪಿಸಲಾಗಿದ್ದು, ಸರ್ವ ಧರ್ಮದವರೂ ತಮ್ಮ ಇಷ್ಟದ ಶೈಲಿಯಲ್ಲಿ ಅತ್ಯಂತ ಆರಾಮದಾಯಕವಾಗಿ ಕಾರ್ಯಕ್ರಮಗಳನ್ನು ನಡೆಸುವಂತೆ ವಿನ್ಯಾಸಗೊಳಿಸಲಾಗಿದೆ. ಬಂದ ಅತಿಥಿಗಳು ಪ್ರಶಾಂತ ಹಾಗೂ ನಿರಾಳ ವಾತಾವರಣದಲ್ಲಿ ಕಾಲ ಕಳೆಯಲು ಇವು ಸೂಕ್ತ ತಾಣಗಳಾಗಿವೆ. ಕಾರ್ಪೊರೇಟ್ ಶೈಲಿಯ ಅದ್ದೂರಿ ಈವೆಂಟ್‌ಗಳಿಂದ ಹಿಡಿದು ಜನಸಾಮಾನ್ಯರ ಸಣ್ಣ ಬಜೆಟ್‌ನ ಕಾರ್ಯಕ್ರಮಗಳವರೆಗೆ, ಪ್ರತಿಯೊಬ್ಬರ ಆರ್ಥಿಕ ಶಕ್ತಿಗೆ ತಕ್ಕಂತೆ ಇಲ್ಲಿ ಸಭಾಂಗಣಗಳು ಲಭ್ಯವಿವೆ.
1. ಪಾಲೆಮಾರ್ ಕನ್ವೆನ್ಶನ್ ಸೆಂಟರ್, ಮೇರಿಹಿಲ್:
ಅದ್ದೂರಿತನ ಮತ್ತು ಸಾಂಪ್ರದಾಯಿಕತೆಯ ಅದ್ಭುತ ಸಮ್ಮಿಲನವೇ ಮೇರಿಹಿಲ್‌ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್. ನೋಡುಗರ ಕಣ್ಣು ಸೆಳೆಯುವ ಮರದ ಕರಕುಶಲತೆಯಿಂದ ಕೂಡಿದ ಭವ್ಯ ಒಳಾಂಗಣ ವಿನ್ಯಾಸ ಇದರ ಪ್ರಮುಖ ಆಕರ್ಷಣೆಯಾಗಿದೆ. ಸಾಂಪ್ರದಾಯಿಕ ಮದುವೆ ಸಮಾರಂಭಗಳ ಜೊತೆಗೆ ಕಾರ್ಪೊರೇಟ್ ಶೈಲಿ ಯ ಹೈ-ಟೆಕ್ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತವಾಗಿದೆ.
ವಿಶೇಷತೆಗಳು: ಅತ್ಯಾಧುನಿಕ ತಂತ್ರಜ್ಞಾನದ ಒಳಾಂಗಣ ಸಭಾಂಗಣ, ಸುಸಜ್ಜಿತ ಹಾಗೂ ವಿಶಾಲವಾದ ಅತಿಥಿ ಕೊಠಡಿಗಳು, ಪ್ರತ್ಯೇಕ ಪ್ರಾರ್ಥನಾ ಮಂದಿರ ಹಾಗೂ ಅತ್ಯಂತ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ.
ಶೀಘ್ರದಲ್ಲಿಯೇ ಅನಾವರಣ:
ಅದ್ಭುತ ಒಳಾಂಗಣ ಸಭಾಂಗಣ ಇರುವ ಈ ಸ್ಥಳದಲ್ಲಿ ಶೀಘ್ರದಲ್ಲಿಯೇ ಗ್ರೀನ್ ವ್ಯಾಲಿ ಎಂಬ ವಿನೂತನ ತೆರೆದ ಸಭಾಂಗಣವೂ ಸಿದ್ಧವಾಗಲಿ ದೆ. ಅತ್ಯಂತ ವಿಶಾಲವಾದ ಸ್ಥಳಾವಕಾಶ ಇರುವ ಈ ತೆರೆದ ಸಭಾಂಗಣ ಸರ್ವರೀತಿಯ ಹೊರಾಂಗಣ ಕಾರ್ಯಕ್ರಮಗಳಿಗೂ ಸೂಕ್ತವಾಗುವಂತೆ ಮೂಡಿಬರಲಿದೆ.
2. ಪಾಲೆಮಾರ್ ಗಾರ್ಡನ್, ಮೋರ್ಗನ್ಸ್ ಗೇಟ್:
ಮಂಗಳೂರು ನಗರದ ಹೃದಯಭಾಗದಲ್ಲಿರುವ ಮೋರ್ಗನ್ಸ್ ಗೇಟ್‌ನಲ್ಲಿ ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುವಂತೆ ಈ ಭವ್ಯ ಗಾರ್ಡನ್ ನಿರ್ಮಿಸಲಾಗಿದೆ. ಪ್ರಶಾಂತವಾದ ಹಸಿರು ಪರಿಸರದಲ್ಲಿ, ಐಷಾರಾಮಿತನದ ಜೊತೆಗೆ ನಿಸರ್ಗದ ಸೌಂದರ್ಯವನ್ನು ಸವಿಯಲು ಇಚ್ಛಿಸುವವರಿಗೆ ಇದು ಸ್ವರ್ಗದಂತಿದೆ. ಇದರ ಅತ್ಯಾಕರ್ಷಕ ವಿನ್ಯಾಸ ಯಾವುದೇ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲು, ಬದುಕಿನ ಸುಂದರ ಕ್ಷಣಗಳನ್ನು ಅವಿಸ್ಮರಣೀಯಗೊಳಿಸಲು ಅನುವು ಮಾಡಿಕೊಡಲಿದೆ.
ವಿಶೇಷತೆಗಳು: ವೈಭವದ ಒಳಾಂಗಣ ಸಭಾಂಗಣ, ತೆರೆದ ಸಭಾಂಗಣ, ಸಾಂಪ್ರದಾಯಿಕ ಕಾಟೇಜ್‌ಗಳು ಮತ್ತು ವಿಶಾಲವಾದ ರೂಮ್‌ಗಳು, ಸುಂದರವಾದ ಹೊರಾಂಗಣ ಈಜುಕೊಳ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಮತ್ತು ಬೃಹತ್ ಹಸಿರು ಮೈದಾನ.
3. ಪಾಲೆಮಾರ್ ಫಾರ್ಮ್ಸ್ ಸುರತ್ಕಲ್:
ನಗರ ಪ್ರದೇಶದ ವಾತಾವರಣದಿಂದ ದೂರವಿದ್ದು, ನಿಸರ್ಗದ ಮೌನ, ತಂಪಾದ ಗಾಳಿ, ಮರಗಳ ನೆರಳು ಹಾಗೂ ಪಕ್ಷಿಗಳ ಕಲರವದ ನಡುವೆ ಹಸಿರನ್ನು ಪ್ರೀತಿಸುವವರಿಗಾಗಿ ಸುರತ್ಕಲ್ ಸಮೀಪ 20 ಎಕರೆ ವಿಶಾಲವಾದ ಜಾಗದಲ್ಲಿ ಈ ಫಾರ್ಮ್ಸ್ ಸಿದ್ಧಗೊಂಡಿದೆ. ಆಪ್ತ ಒಡನಾಡಿಗಳೊಂದಿಗೆ ಆಚರಿಸುವ ಮದುವೆ, ಹೊರಾಂಗಣ ಕಾರ್ಯಕ್ರಮಗಳು, ಬರ್ತ್‌ಡೇ ಪಾರ್ಟಿಗಳು, ಮೆಹೆಂದಿ ಹಾಗೂ ಕೌಟುಂಬಿಕ ಸಮಾರಂಭಗಳಿಗೆ ಇದು ಸೂಕ್ತ ತಾಣ.
ವಿಶೇಷತೆಗಳು: ವಿಶಾಲವಾದ ತೆರೆದ ಸಭಾಂಗಣ, ಈಜುಕೊಳ, ಮಕ್ಕಳು ಆನಂದಿಸಲು ಸುಸಜ್ಜಿತ ಮಕ್ಕಳ ಆಟದ ಪ್ರದೇಶ ಮತ್ತು ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ.
4. ನೇತ್ರಾವತಿ ಸಭಾಭವನ, ಕಡೆಕಾರ್ ಜೆಪ್ಪಿನಮೊಗರು:
ಮಂಗಳೂರಿನ ಜೀವನಾಡಿ ನೇತ್ರಾವತಿ ನದಿಯ ದಡದಲ್ಲಿರುವ ಜೆಪ್ಪಿನಮೊಗರಿನ ಕಡೆಕಾರ್ ಎಂಬ ಅತ್ಯಂತ ಪ್ರಶಾಂತ ಮತ್ತು ಪವಿತ್ರ ವಾತಾವರಣದಲ್ಲಿ ಈ ಸಭಾಂಗಣ ತಲೆಯೆತ್ತಿದೆ. ಒಂದು ಬದಿಯಲ್ಲಿ ನದಿಯ ತಣ್ಣನೆ ಗಾಳಿ, ಇನ್ನೊಂದು ಬದಿಯಲ್ಲಿ ಪುರಾತನ ದೇವಸ್ಥಾನವಿದ್ದು, ಇಡೀ ಪರಿಸರಕ್ಕೆ ದೈವಿಕ ಕಳೆಯನ್ನು ನೀಡುತ್ತದೆ. ವಿವಾಹ ಕಾರ್ಯಕ್ರಮಗಳು, ಧಾರ್ಮಿಕ ಕಾರ್ಯಕ್ರಮಗಳು, ಸಂಗೀತ ಕಛೇರಿಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಇದು ಅತ್ಯಂತ ಪ್ರಶಸ್ತವಾಗಿದೆ. ಕಡಿಮೆ ದರದಲ್ಲಿ ಜನಸಾಮಾನ್ಯರಿಗೂ ಅನುಕೂಲವಾಗುವಂತೆ ಇದನ್ನು ನಿರ್ಮಿಸಲಾಗಿದೆ.
ವಿಶೇಷತೆಗಳು: ವಿಶಾಲ ಒಳಾಂಗಣ ಸಭಾಂಗಣ, ಅಚ್ಚುಕಟ್ಟಾದ ಊಟದ ಹಾಲ್ ಮತ್ತು ಅಡುಗೆ ಮನೆ. (ಇಲ್ಲಿ ಕೇವಲ ಶುದ್ಧ ಸಸ್ಯಾಹಾರಿ ಆಹಾರ ತಯಾರಿಕೆಗೆ ಮಾತ್ರ ಅವಕಾಶವಿದ್ದು, ಸಾತ್ವಿಕ ವಾತಾವರಣ ಬಯಸುವವರ ನೆಚ್ಚಿನ ತಾಣವಾಗಲಿದೆ).
ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ:
ಪಾರ್ಕಿಂಗ್ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ನಾಲ್ಕೂ ಸಭಾಭವನಗಳಲ್ಲಿ ಅತ್ಯಂತ ವಿಶಾಲವಾದ, ವ್ಯವಸ್ಥಿತವಾದ ಪಾರ್ಕಿಂಗ್ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ನೂರಾರು ವಾಹನಗಳು ಏಕಕಾಲದಲ್ಲಿ ಯಾವುದೇ ಗೊಂದಲವಿಲ್ಲದೆ ಬಂದು ಹೋಗಲು ಇಲ್ಲಿ ಮುಕ್ತ ಅವಕಾಶವಿದೆ.
ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯರಸ್ತೆಗಳ ಸಂಪರ್ಕ:
ಎಲ್ಲಾ ನಾಲ್ಕು ಸಭಾಭವನಗಳನ್ನು ನಗರದ ಪ್ರಮುಖ ಮುಖ್ಯ ರಸ್ತೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿಯೇ ನಿರ್ಮಿಸಲಾಗಿದೆ. ಹಾಗಾಗಿ ದೂರದ ಊರುಗಳಿಂದ ಬರುವ ಅತಿಥಿಗಳು ಹೆಚ್ಚಿನ ಹುಡುಕಾಟವಿಲ್ಲದೆ, ಉತ್ತಮ ರಸ್ತೆ ಸಂಪರ್ಕದ ಮೂಲಕ ಅತ್ಯಂತ ಸುಲಭವಾಗಿ ಮತ್ತು ಸರಾಗವಾಗಿ ನಿಗದಿತ ಸಮಯಕ್ಕೆ ಸಭಾಭವನಗಳ ನ್ನು ತಲುಪಬಹುದು.
ಅತೀ ಶೀಘ್ರ ಕಡಲ ತೀರದಲ್ಲಿ ತೆರೆದ ಸಭಾಂಗಣ:
ಇದೇ ಮೊದಲ ಬಾರಿಗೆ ಕಡಲ ನಗರಿ ಮಂಗಳೂರಿನ ಸಮುದ್ರ ತೀರದಲ್ಲಿ ಅದ್ದೂರಿ, ಭವ್ಯ ಸಮಾರಂಭಗಳನ್ನು ನಡೆಸಲು ಸುಸಜ್ಜಿತ ತೆರೆದ ಸಭಾಂಗಣ ಸಿದ್ಧಗೊಳ್ಳುತ್ತಿದೆ. ಶೀಘ್ರದಲ್ಲೇ ಈ ಸಭಾಂಗಣವೂ ಸಾರ್ವಜನಿಕರಿಗಾಗಿ ಲಭ್ಯವಾಗಲಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು: 7411394759, 7483574759, 9148435759 ಭೇಟಿ ನೀಡಿ: ಅಧಿಕೃತ ವೆಬ್‌ಸೈಟ್: www.palemar.com


