ಉದ್ಯೋಗಾವಕಾಶ: ಮೇ.30 ರಂದು ಸಂದರ್ಶನ

ಉದ್ಯೋಗಾವಕಾಶ: ಮೇ.30 ರಂದು ಸಂದರ್ಶನ

ಮಂಗಳೂರು: ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ ಮೇ 30 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಯಾವುದೇ ಪದವಿ ಹೊಂದಿರುವ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಲಯಾಳಂ/ಹಿಂದಿ/ಇಂಗ್ಲಿಷ್/ತಮಿಳು ಭಾಷೆ ತಿಳಿದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಂಗಳೂರು. ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article