‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ

‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ


ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ ‘ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದೆ.

ಭಾರತ್ ಸಿನಿಮಾಸ್‌ನಲ್ಲಿ ಸಿನಿಮಾದ ಬಿಡುಗಡೆ ಸಮಾರಂಭ ಜರಗಿತು. ಅತಿಥಿಗಳು ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.

ಹಿರಿಯ ನಿರ್ದೇಶಕ ವಿಜಯಕುಮಾರ್ ಕೊಡಿಯಲ್ ಬೈಲ್ ಮಾತನಾಡಿ, ತುಳು ಸಿನಿಮಾ ರಂಗದಲ್ಲಿ ಹಿರಿಯರು ಹಾಕಿಕೊಟ್ಟ ದಾರಿಯಲ್ಲಿ ಕಿರಿಯರು, ಹೊಸಬರು ಸಿನಿಮಾರಂಗದಲ್ಲಿ ಮಿಂಚುತ್ತಿದ್ದಾರೆ. ಯುವ ಪ್ರತಿಭಾವಂತರು ಸಿನಿಮಾರಂಗದಲ್ಲಿ ಬೌಂಡರಿ, ಸಿಕ್ಸರ್ ಬಾರಿಸುವ ಮೂಲಕ ಚೆನ್ನಾಗಿ ಆಡಲಿ ಎಂದರು.

ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತನಾಡಿ, ಗಜಾನನ ಕ್ರಿಕೆಟರ್ಸ್ ಸಿನಿಮಾದ ಪ್ರೀಮಿಯರ್ ಶೋಗಳನ್ನು ಪ್ರೇಕ್ಷಕರು ನೋಡಿ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಿರ್ಮಾಪಕ ಪ್ರಜ್ವಲ್ ಶೆಟ್ಟಿ, ರೋಹನ್ ಪಿರೇರ, ಸಂತೋಷ್ ಲಾಡ್ ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಸಿನಿಮಾವನ್ನು ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು. 

ಉದ್ಯಮಿ ಮೈಕಲ್ ಡಿ’ಸೋಜ ಶುಭ ಹಾರೈಸಿದರು.

ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ, ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೊಗೀಶ್ ಶೆಟ್ಟಿ ಜಪ್ಪು, ತೋನ್ಸೆ ಪುಷ್ಕಳ್ ಕುಮಾರ್, ಭೋಜರಾಜ್ ವಾಮಂಜೂರು, ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಪ್ರಸನ್ನ ಶೆಟ್ಟಿ ಬೈಲೂರು, ಲಂಚುಲಾಲ್, ನವೀನ್ ಶೆಟ್ಟಿ ಆರ್ಯನ್, ದಯಾನಂದ ಹೆಜಮಾಡಿ, ನವೀನ್ ಶೆಟ್ಟಿ ಎಡ್ಮೆಮಾರ್, ವಿನೀತ್ ಕುನಾರ್, ನಿರ್ದೇಶಕ ಕೀರ್ತನ್ ಭಂಡಾರಿ, ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ, ಸಹನಿರ್ಮಾಪಕರಾದ ರೋಹನ್ ಪಿರೇರಾ, ಸಂತೋಷ್ ಲಾಡ್, ಶೈಲಶ್ರಿ ಮುಲ್ಕಿ, ರೂಪ ವರ್ಕಾಡಿ, ಅನ್ವಿತಾ ಸಾಗರ, ಸಮತಾ ಅಮೀನ್, ಸಂಗೀತ ನಿರ್ದೇಶಕ ಸೃಜನ್ ಕುಮಾರ್ ತೋನ್ಸೆ, ಉಪಸ್ಥಿತರಿದ್ದರು. 

ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article